ತುಂಗಾ ನದಿಯಲ್ಲಿ ಮೀನಿಗೆ ಹಾಕಿದ್ದ ಗಾಳಕ್ಕೆ ಸಿಕ್ಕಿಬಿತ್ತು ಮೊಸಳೆ ಮರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಜನವರಿ 2022

ಮೀನು ಹಿಡಿಯಲು ಹಾಕಿದ್ದ ಗಾಳಕ್ಕೆ ಮೊಸಳೆ ಮರಿ ಸಿಕ್ಕಿಬಿದ್ದಿದೆ. ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ರಶೀದ್ ಅವರಿಗೆ ಮೊಸಳೆ ಸಿಕ್ಕಿದೆ. ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ, ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾ ನದಿಯಲ್ಲಿ ಗಾಳ ಹಾಕಿ, ಮೀನು ಹಿಡಿಯುತ್ತಿದ್ದರು.

ಗಾಳ ಎಳೆದಾಗ ಬಂತು ಮೊಸಳೆ

ರಶೀದ್ ಅವರು ಮೀನಿಗಾಗಿ ತುಂಗಾ ನದಿಯಲ್ಲಿ ಹಾಕಿದ್ದ ಗಾಳ ಜಗ್ಗಿದಂತಾಗಿದೆ. ಕೂಡಲೆ ಅವರು ಗಾಳವನ್ನು ಮೇಲಕ್ಕೆ ಎಳೆದುಕೊಂಡಿದ್ದಾರೆ. ಗಾಳದಲ್ಲಿ ಮೀನಿನ ಬದಲು ಮೊಸಳೆ ಮರಿ ಸಿಕ್ಕಿಬಿದ್ದಿತ್ತು. ಇದನ್ನು ಕಂಡು ಅವರು ಭಯಗೊಂಡಿದ್ದಾರೆ. ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾರೆ.

ತುಂಗಾ ನದಿಯಲ್ಲಿ ಮೊಸಳೆ ಸಂತಾನೋತ್ಪತ್ತಿ

ಇತ್ತೀಚೆಗೆ ತುಂಗಾ, ಭದ್ರಾ ನದಿಗಳ ಸಂಗಮ ಸ್ಥಳವಾದ ಕೂಡಲಿಯಲ್ಲಿ ಮೊಸಳೆ ಪ್ರಯತ್ಯಕ್ಷವಾಗಿತ್ತು. ಈಗ ಕೂಡಲಿ ಸಮೀಪದ ಪಿಳ್ಳಂಗಿರಿ ಬಳಿ ಮೊಸಳೆ ಮರಿ ಪ್ರತ್ಯಕ್ಷವಾಗಿದ್ದು, ಸಂತಾನೋತ್ಪತ್ತಿಯಾಗಿರುವುದಕ್ಕೆ ಸಾಕ್ಷಿಯಾಗಿದೆ. ತುಂಗಾ ನದಿಯಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಈ ಭಾಗವ ಜನರಲ್ಲಿ ಭಯ ಮೂಡಿಸಿದೆ.

ಜನರು ತುಂಗಾ ನದಿ ಬಳಿಗೆ ಹೋಗಿ ಬರುತ್ತಾರೆ. ದನಕರುಗಳು ಕೂಡ ನೀರು ಕುಡಿಯಲು ಹೊಳೆ ಬಳಿಗೆ ಬರುತ್ತವೆ. ಮೊಸಳೆಗಳು ಇರುವುದು ಗೊತ್ತಾಗುತ್ತಿದ್ದಂತೆ ಜನರು ಎಚ್ಚೆತ್ತುಕೊಂಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಫೋಟೊ, ಮಾಹಿತಿ : ಮಿಥುನ್ ಐಯ್ಯಂಗಾರ್

ಇದನ್ನೂ ಓದಿ | ಕೂಡಲಿಯಲ್ಲಿ ಮತ್ತೆ ಆತಂಕ, ಸ್ನಾನಘಟ್ಟದ ಬಳಿಗೆ ಬಂದು ಕುಳಿತ ಮೊಸಳೆ

ಇದನ್ನೂ ಓದಿ | ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್

ABOUT ME DECEMBER REPORT

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 9, 2022 at 9:08 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 9, 2022

Leave a Comment