ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗಾಜನೂರಿನಲ್ಲಿ (Gajanuru) ಗಾರೆ ಮೇಸ್ತ್ರಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತನನ್ನು ಶಿವಮೊಗ್ಗದ ಹೊಸಮನೆ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.

ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ವಾಸವಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ದುಷ್ಕರ್ಮಿಗಳು ಶ್ರೀನಿವಾಸ್ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

tunga-nagara-police-visit-gajanuru

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ – ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2026

Leave a Comment