ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 FEBRURARY 2023
SHIMOGA : ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದ ಹೆಸರು (Airport Name) ಘೋಷಣೆ ಮಾಡದಿರುವುದು ಕುತೂಹಲ ಮೂಡಿಸಿದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು (Airport Name) ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದರು. ಅದರಂತೆ ರಾಜ್ಯ ಸಚಿವ ಸಂಪುಟವು ಕುವೆಂಪು ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಘೋಷಣೆ ಮಾಡದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದರು. ಆದರೆ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಹೆಸರಿನ ವಿಚಾರವಾಗಿ ಯಾವುದೆ ಪ್ರಸ್ತಾಪ ಮಾಡಲಿಲ್ಲ.
ಭಾಷಣದ ಆರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿಕೊಂಡರು. ಆದರೆ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗುತ್ತದೆ ಎಂಬುದರ ಕುರಿತು ಯಾವುದೆ ಪ್ರಸ್ತಾಪ ಮಾಡಲಿಲ್ಲ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
ಮತ್ತೆ ಹೆಚ್ಚಾಗುತ್ತಾ ಒತ್ತಡ, ಆಗ್ರಹ?
ವಿಮಾನ ನಿಲ್ದಾಣಕ್ಕೆ ಹಲವು ಹೆಸರುಗಳನ್ನು ಇಡಬೇಕು ಎಂಬ ಒತ್ತಡವಿತ್ತು. ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಹಲವು ಪ್ರಮುಖರು ವಿವಿಧ ಸಂದರ್ಭದಲ್ಲಿ ಅನೇಕ ಹೆಸರುಗಳನ್ನು ಸೂಚಿಸಿದ್ದರು. ಇದೆಲ್ಲದಕ್ಕು ಪ್ರಧಾನಿ ಮೋದಿ ಅವರು ತೆರೆ ಎಳೆಯಲಿದ್ದಾರೆ ಎಂಬ ಚರ್ಚೆಗಳಿದ್ದವು. ಆದರೆ ಪ್ರಧಾನಿ ಮೋದಿ ಅವರು ಹೆಸರಿನ ವಿಚಾರ ಪ್ರಸ್ತಾಪ ಮಾಡಲಿಲ್ಲ. ಹಾಗಾಗಿ ಹೆಸರಿನ ವಿಚಾರವಾಗಿ ಶಿವಮೊಗ್ಗ ಜಿಲ್ಲೆ ಮತ್ತಷ್ಟು ಪ್ರತಿಭಟನೆ, ಆಗ್ರಹಗಳಿಗೆ ಸಾಕ್ಷಿಯಾಗುವ ಸಾದ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಧಾನಿ, ಫೋಟೊಗಳ ಮೂಲಕ ಮೋದಿ ಭೇಟಿಯ ಕಂಪ್ಲೀಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422