ಹರಿದ ಮಾಸ್ಕ್ ಕೊಟ್ಟ ಸುಳಿವು, 6 ಆರೋಪಿಗಳು ಅರೆಸ್ಟ್, ಉಳಿದ 6 ಮಂದಿಗೆ ನಡೆಯುತ್ತಿದೆ ತಲಾಶ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 DECEMBER 2022

ಶಿವಮೊಗ್ಗ : ಕಾಡಿನಲ್ಲಿ ಬರ್ತಡೆ ಪಾರ್ಟಿ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಒಂದು ಲಕ್ಷ ರೂ. ದರೋಡೆ ಮಾಡಿದ್ದ ಗ್ಯಾಂಗನ್ನು (dacoity gang) ಪೊಲೀಸರು ಬಂಧಿಸಿದ್ದಾರೆ.

Shimoga Nanjappa Hospital

ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದ ಶಫೀವುಲ್ಲಾ (35), ಶೇಷಾದ್ರಿಪುರಂನ ಮಾರುತಿ ಅಲಿಯಾಸ್ ಕ್ಯಾಂಡಿ (28), ಮೆಹದಿ ನಗರದ ಆವೇಜ್ ಅಲಿ (22), ಬಸವನಗುಡಿಯ ಹೊನ್ನೇಶ್ ಅಲಿಯಾಸ್ ಚಿನ್ನು (24), ಗಣೇಶ್ (22), ವಿನೋದ (19) ಬಂಧಿತರು. ಇನ್ನು 6 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರ ಶೋಧ ಕಾರ್ಯ ನಡೆಯುತ್ತಿದೆ.

(dacoity gang)

ಮಾಸ್ಕ್ ಹಾಕಿಕೊಂಡು ಬಂದಿದ್ದರು

ಶಿವಮೊಗ್ಗದ ಯತೀಶ್ ಮತ್ತು ಆತನ ಸ್ನೇಹಿತರು ವೀರಣ್ಣ ಬೆನವಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ https://chat.whatsapp.com/KChu2C1bGTM2v9HmZlfIkSಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಮಾಸ್ಕ್ ಧರಿಸಿ ಬೈಕುಗಳಲ್ಲಿ ಬಂದ 12 ಅಪರಿಚಿತರು, ಪಾರ್ಟಿ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ್ದಾರೆ. ಎಲ್ಲರಿಗು ಹೊಡೆದು ಒಂದು ಲಕ್ಷ ರೂ. ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು.

(dacoity gang)

ಹರಿದ ಮಾಸ್ಕ್ ನೀಡಿತು ಸುಳಿವು

ದರೋಡೆ ಮಾಡಿಕೊಂಡು ಪರಾರಿಯಾಗುತ್ತಿದ್ದಾಗ ಗ್ಯಾಂಗಿನಲ್ಲಿದ್ದ ಒಬ್ಬನ ಮಾಸ್ಕ್ ಹರಿದು ಹೋಗಿದೆ. ಪಾರ್ಟಿ ಮಾಡುತ್ತಿದ್ದವರಿಗೆ ಆತನ ಗುರುತು ಪತ್ತೆಯಾಗಿದೆ. ಟ್ಯಾಂಕ್ ಮೊಹಲ್ಲಾದ ಶಫಿ ಎಂಬುದು ಖಚಿತವಾಗಿದೆ. ಈ ಹಿನ್ನೆಲೆ ಕುಂಸಿ ಪೊಲೀಸ್ ಠಾಣೆಯಲ್ಲಿ ಶಫಿ ಮತ್ತು ಇತರರ ವಿರುದ್ಧ ದೂರು ನೀಡಿದ್ದರು.

ALSO READ – 5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ ದಂಪತಿ ರೂಮೊಳಗೆ ಹೋಗುತ್ತಿದ್ದಂತೆ ಕಾದಿತ್ತು ಶಾಕ್

ತನಿಖೆ ನಡಸಿದ ಪೊಲೀಸರು ಶಫಿ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಂದು ಬೈಕ್, ಐದು ಮೊಬೈಲ್ ಫೋನ್ ಮತ್ತು 830 ರೂ. ನಗದು ವಶಕ್ಕೆ ಪಡೆದಿದ್ದಾರೆ. ಕುಂಸಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2022

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

Leave a Comment