ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು, ಹೊಳಲೂರು ಹೋಬಳಿಯ ಆಲದಹಳ್ಳಿಯಲ್ಲಿ ವಾಸ್ತವ ಮಾಡಲಿದ್ದಾರೆ.
ಆಲದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು.
ಆರೋಗ್ಯ ಕೇಂದ್ರ, ಅಂಗನವಾಡಿಗೆ ಭೇಟಿ
ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಲ್ಲಿನ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿಗೆ ಭೇಟಿ ನೀಡಿದರು. ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕರಿಂದ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಆಲದಹಳ್ಳಿಯ ವಿವಿಧೆಡೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ಪಡೆಯಲಿದ್ದಾರೆ. ಅಲ್ಲದೆ ಹಲವು ಸಭೆಗಳನ್ನು ಕೂಡ ನಡೆಸಲಿದ್ದಾರೆ. ರಾತ್ರಿ ಇಲ್ಲಿಯೆ ವಾಸ್ತವ್ಯ ಮಾಡಲಿದ್ದಾರೆ.




ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






