ಕುಂಚೇನಹಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಸಂವಾದ, ಲಂಬಾಣಿ ಭಾಷೆಗೆ ಲಿಪಿಯ ಗೌರವದ ಭರವಸೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021

ಸಾವಿರಾರು ವರ್ಷಗಳ ಇತಿಹಾಸ ಇರುವ ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಂಜಾರ ಸಮುದಾಯವರು ರಾಜ್ಯದಲ್ಲಿ ಅಲ್ಲದೆ ಹೊರ ರಾಜ್ಯಗಳಲ್ಲೂ ಇದ್ದಾರೆ. ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವುದರಿಂದ ಅದನ್ನು ಮತ್ತಷ್ಟು ಶ್ರೀಮಂತಗೊಳಿಸುವ ಪ್ರಯತ್ನ ಮಾಡ ಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

ಈ ಭಾಗದಲ್ಲಿ ಹಲವು ವರ್ಷಗಳಿಂದ ಜೀವಂತವಾಗಿರುವ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು, ಜನಾಂಗದವರಿಗೆ ಸವಲತ್ತು ಒದಗಿಸುವುದು, ಆರೋಗ್ಯ ಕೇಂದ್ರ, ಪ್ರೌಢಶಾಲೆ ಮತ್ತು ಇತರೆ ಬೇಡಿಕೆಗಳ ಪಟ್ಟಿ ಮಾಡಿಕೊಳ್ಳಲಾಗಿದೆ. ನಾವು ಅಧಿಕಾರದಲ್ಲಿ ಇಲ್ಲದೆ ಹೋದರೂ ಪ್ರತಿಪಕ್ಷದಲ್ಲಿದ್ದು ನಿಮ್ಮ ಪರವಾಗಿ ಒತ್ತಡ ತಂದು ಧ್ವನಿಯಾಗಿ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಲಂಬಾಣಿ ಸಮುದಾಯದ ಸಾರ್ವತ್ರಿಕ ಬೇಡಿಕೆಗಳನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗುವುದು. ನಮ್ಮ ಸರಕಾರದಲ್ಲಿ ಇವೆಲ್ಲವನ್ನು ಖಂಡಿತ ಈಡೇರಿಸಲಾಗುವುದು ಎಂದರು.

ಇದಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರು ಗ್ರಾಮಸ್ಥರ ಅಹವಾಲು ಆಲಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್, ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಗ್ರಾಮ ಮುಖಂಡ ನಾಗೇಶ್ ನಾಯ್ಡ್ ಮತ್ತಿತರರು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 16, 2021 at 5:55 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 16, 2021

Leave a Comment