SHIMOGA, 24 AUGUST 2024 : ಕಾಡಾನೆ (Wild Elephant) ದಾಳಿಗೆ ಕೃಷಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ.
ಹನುಮಂತಪ್ಪ, ಮೃತ ದುರ್ದೈವಿ. ಪುರದಾಳು ಗ್ರಾಮ ಸಮೀಪ ಇರುವ ಆಲದೇವರ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನ ಕೃಷ್ಣ ಪಟಗಾರ್, ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಆನೆ ದಾಳಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈಗ ಸ್ಥಳಕ್ಕೆ ತೆರಳುತ್ತಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್
ಹನುಮಂತಪ್ಪ ಅವರು ಸಂಪತ್ ಕುಮಾರ್ ಎಂಬುವವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಶ್ಫಾಕ್ ಅಹಮದ್ ಖಾನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಹನುಂತಪ್ಪಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ.
ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್‌ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200