ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 5 NOVEMBER 2024 : ಕಾಡಾನೆಯೊಂದು (Elephant) ಎಲಿಫೆಂಟ್ ಪ್ರೊಟೆಕ್ಟೀವ್ ಟ್ರಂಚ್‌ಗೆ ಬಿದ್ದು ಸಾವನ್ನಪ್ಪಿದೆ. ಶಿವಮೊಗ್ಗ ತಾಲೂಕು ಆಯನೂರು ಸಮೀಪ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಎರಡು ದಿನದ ಹಿಂದೆಯೆ ಕಾಡಾನೆ ಟ್ರಂಚ್ ಒಳಗೆ ಬಿದ್ದಿದೆ ಎನ್ನಲಾಗಿದೆ. ಅದರಿಂದ ಮೇಲೆ ಬರಲಾಗದೆ ಸಾವನ್ನಪ್ಪಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಆನೆಯ ಕಾಲುಗಳಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಶಿವಮೊಗ್ಗ ತಾಲೂಕಿನ ಸಿರಿಗೆರೆ, ಪುರದಾಳು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿತ್ತು. ಈ ಆನೆಗಳನ್ನು ಇಲ್ಲಿಂದ ಓಡಿಸಬೇಕು ಅಥವಾ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಹಾಗಾಗಿ ಸೆಕ್ರೆಬೈಲು ಬಿಡಾರದಿಂದ ಮೂರು ಆನೆಗಳನ್ನು ತಂದು ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು.
ಇದನ್ನೂ ಓದಿ » ಕಾರು, ಬೈಕ್ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ
An elephant died after falling into a protective trench in Shivamogga’s Ayanoor area. Forest officials suspect the elephant fell two days ago and couldn’t escape, with its legs getting stuck. Local residents had demanded action against the rising elephant menace in Sirigere and Puradalu regions.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422