ಶಿವಮೊಗ್ಗ ಲೈವ್
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆ ಮಹಿಳೆಯೊಬ್ಬರು ಮನನೊಂದು 30ಕ್ಕೂ ಹೆಚ್ಚಿನ ಮಾತ್ರೆಗಳನ್ನು ಸೇವಿಸಿದ್ದರು. ವಿಷಯ ತಿಳಿದು ತಕ್ಷಣವೇ 112 ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಮಹಿಳೆಯೊಬ್ಬರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಾಹಿತಿ ಗೊತ್ತಾಗುತ್ತಿದ್ದಂತೆ 112 ಸಹಾಯವಾಣಿ ಪೊಲೀಸರು ಕೂಡಲೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರ ಸಮಯಪ್ರಜ್ಞೆಯಿಂದ ಮಹಿಳೆಯ ಪ್ರಾಣ ಉಳಿದಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಹೆಚ್‌ಸಿ ವೀರೇಶಯ್ಯ .ಬಿ.ಎಂ ಮತ್ತು ಎಹೆಚ್‌ಸಿ ಸುರೇಶ್ ನಾಯ್ಕ ಅವರ ಕರ್ತವ್ಯ ನಿಷ್ಠೆಗೆ ಜಿಲ್ಲಾ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.