ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೋಗಾನೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಿನಿಸ್ಟರ್ ಹೇಳಿದ್ದೇನು?
- ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು.
- ಮೊದಲ ಹಂತದ ಕಾಮಗಾರಿಗೆ ಸರ್ಕಾರ ಕಾಯ್ದಿರಿಸಿದ್ದ ಒಟ್ಟು 220 ಕೋಟಿ ರೂ.ಗಳಲ್ಲಿ 150 ಕೋಟಿ ರೂ.ವೆಚ್ಚದ ಕಾಮಗಾರಿ ಭರದಿಂದ ಸಾಗಿವೆ. ಉಳಿದಂತೆ ಕಚೇರಿ, ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಆರಂಭಗೊಳ್ಳಲಿವೆ.
- ಅಂದುಕೊಂಡಂತೆ ಎಲ್ಲಾ ಕಾಮಗಾರಿಗಳು ನಡೆದಲ್ಲಿ 2021ರ ಆರಂಭದಲ್ಲಿ ವಿಮಾನ ಹಾರಾಟ ಶುರುವಾಗಲಿದೆ.
- ಈಗ ರನ್‌ವೇ, ಕಾಂಪೌಂಡ್ ಕಾಮಗಾರಿಗಳು ನಡೆಯುತ್ತಿವೆ. ಕಟ್ಟಡ ಕಾಮಗಾರಿಗಳು ಸದ್ಯದಲ್ಲಿ ಆರಂಭಗೊಳ್ಳಲಿವೆ. ಕಾಮಗಾರಿಗಳಿಗೆ ಇನ್ನಷ್ಟು ವೇಗ ಹೆಚ್ಚಿಸಲಾಗುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು.
- ವಿಮಾನ ನಿಲ್ದಾಣ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದು, ಸ್ಥಗಿತಗೊಂಡಿದ್ದ ಕಾಮಗಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಗತ್ಯ ಅನುದಾನ ಬಿಡುಗಡೆ ಮಾಡುವ ಮೂಲಕ ಕಾಮಗಾರಿಗಳಿಗೆ ವೇಗ ಹೆಚ್ಚಿಸಿದ್ದಾರೆ.
ಮಹಾನಗರಪಾಲಿಕೆ ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಚೀಫ್ ಇಂಜಿನಿಯರ್ ಕಾಂತರಾಜ್, ಎಕ್ಸಿಕ್ಯುಟಿವ್ ಇಂಜಿನಿಯರ್ ಶಾಂತಕುಮಾರ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಕಿರಣ್‌ಕುಮಾರ್, ರೈಟ್ಸ್ ವಿಮಾನಯಾನ ಸಂಸ್ಥೆಯ ಸಂಯೋಜಕ ರಾಜು, ಗುತ್ತಿಗೆದಾರ ಶರೀಫ್, ಚನ್ನಬಸಪ್ಪ, ಜ್ಞಾನೇಶ್ವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422