ಅರಹತೊಳಲು, ಕೈಮರದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020

ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ ಸೇನೆಯನ್ನು ಬಳಸಿ ತಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲ ಅಡೆತಡೆಗಳನ್ನು ಮೀರಿ ರೈತರು ದೆಹಲಿಯತ್ತ ಮುನ್ನುಗ್ಗುತ್ತಿದ್ದಾರೆ. ಹೆದ್ದಾರಿಗಳಲ್ಲಿ ಅಡುಗೆ, ಊಟ ಮಾಡಿ ಚಳವಳಿ ನಡೆಸುತ್ತಿದ್ದಾರೆ. ರೈತರ ಮೇಲೆ ಜಲಫಿರಂಗಿ, ಟಿಯರ್ ಗ್ಯಾಸ್ ಬಳಸಿ, ಲಾಠಿ ಬೀಸಿ ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನ ನಡೆಸಲಾಗಿದೆ. ರೈತರ ಬೇಡಿಕೆ ಈಡೇರಿಸದೆ ಹೋದರೆ ಡಿಸೆಂಬರ್ 7ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ತಡೆ ಚಳವಳಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಟಿ.ಎಂ.ಚಂದ್ರಪ್ಪ, ಈಶಣ್ಣ,  ಡಿ.ಹೆಚ್.ರಾಮಚಂದ್ರಪ್ಪ ,ಶಿವಮೂರ್ತಿ, ರವಿ ಸೇರಿದಂತೆ ಹಲವರು ಇದ್ದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment