ಆಯನೂರಿನಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮೃತದೇಹದ ಮೇಲೆ ಅಚ್ಚಾದ ಟೈರ್‌ ಮಾರ್ಕ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಆಯನೂರು: ಶಿವಮೊಗ್ಗ ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ (Fatal Accident). ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ (Injured).

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಕಿಫ್ (21) ಮತ್ತು ಚಾಂದ್ ಪೀರ್ (18) ಎಂದು ಗುರುತಿಸಲಾಗಿದೆ. ಇಬ್ಬರೂ ಆಯನೂರಿನಿಂದ ಹಾರನಹಳ್ಳಿ (Haranahalli) ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಿವಮೊಗ್ಗ ತಾಲೂಕಿನ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ (27) ಎಂದು ಗುರುತಿಸಲಾಗಿದೆ. ಈತ ಚಾಮೇನಹಳ್ಳಿಯಿಂದ (Chamenahalli) ಆಯನೂರು ಕಡೆಗೆ ಬರುತ್ತಿದ್ದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ.

ACCIDENT-NEWS-GENERAL-IMAGE.

ವೇಗವಾಗಿ ಬಂದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ತಕ್ಷಣ ಅಕಿಫ್ ಮತ್ತು ಚಾಂದ್ ಪೀರ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ಅಪರಿಚಿತ ವಾಹನವು ರಸ್ತೆಯ ಮೇಲೆ ಬಿದ್ದಿದ್ದ ಈ ಇಬ್ಬರು ಯುವಕರ ಮೇಲೆ ಹರಿದು ಹೋಗಿದೆ. ಆಗ ಇಬ್ಬರೂ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಡಾ.ಜಯಶ್ರೀ, ಪುತ್ರ ಆಕಾಶ್‌ ಆತ್ಮಹತ್ಯೆ ಕೇಸ್‌, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?

ಮೃತ ಯುವಕನ ಮೈಮೇಲೆ ವಾಹನದ ಟೈರ್ ಮಾರ್ಕ್‌ಗಳು (Tyre Mark) ಅಚ್ಚಾಗಿ ಬಿದ್ದಿರುವುದು ಈ ಘಟನೆಯ ಭೀಕರತೆಯನ್ನು ತೋರಿಸುತ್ತದೆ. ಮತ್ತೊಂದು ಬೈಕ್‌ನಲ್ಲಿದ್ದ ಗುರುಕಿರಣ್‌ಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment