ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021
ತುಂಗಾ ನದಿಯಲ್ಲಿ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಶೋಧ ಕಾರ್ಯ ಅಂತ್ಯವಾಗಿದೆ. ಎರಡು ದಿನ ನಿರಂತರ ಶೋಧ ನಡೆಸಿದರೂ ಯುವಕನ ಸುಳಿವು ಸಿಕ್ಕಿಲ್ಲ.
ಏನಿದು ಶೋಧ ಕಾರ್ಯ?
ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಯುವಕನೊಬ್ಬ ಮುಳುಗಿದ್ದಾನೆ ಎಂದು ಹೇಳಲಾಗಿತ್ತು. ಈ ಸಂಬಂಧ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶೋಧ ಕಾರ್ಯಾಚರಣೆ ನಡೆಸಿದರು. ಎರಡು ದಿನದ ಕಾರ್ಯಾಚರಣೆ ಬುಧವಾರಕ್ಕೆ ಅಂತ್ಯವಾಯಿತು.
ಶೋಧಕ್ಕೆ ಕಾರಣವಾಯ್ತು ಚಪ್ಪಲಿ
ಪಿಳ್ಳಂಗಿರಿಯ ಕುಶ (33) ಎಂಬಾತ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾನೆ. ಆತನ ಚಪ್ಪಲಿಗಳು ತುಂಗಾ ನದಿಯ ದಂಡೆಯ ಮೇಲೆ ಪತ್ತೆಯಾಗಿವೆ. ಹಾಗಾಗಿ ಆತ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿತ್ತು.
ಕುಶನ ಶೋಧ ಕಾರ್ಯಕ್ಕಾಗಿ ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಎರಡು ದಿನ ಅಗ್ನಿಶಾಮಕ ಸಿಬ್ಬಂದಿಗಳು ತುಂಗಾ ನದಿಯಲ್ಲಿ ಪತ್ತೆ ಕಾರ್ಯ ನಡೆಸಿದರು. ಆದರೆ ಕುಶ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200