ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 20 JUNE 2024
SHIMOGA : ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು (Firing) ತಗುಲಿ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಲೋಕೇಶ್ (36) ಗಾಯಾಳು.
ಜೂ.15ರಂದು ರಾತ್ರಿ ಕುಮಾರ ನಾಯ್ಕ ಎಂಬುವವರ ಜಮೀನಿನಲ್ಲಿ ಜೋಳ ಕಾಯಲು ಹೋಗಿದ್ದ ಸಂದರ್ಭ ಅವಘಡ ಸಂಭವಿಸಿದೆ. ಕುಮಾರ ನಾಯ್ಕ ಕೋವಿ ಹಿಡಿದುಕೊಂಡಿದ್ದಾಗ ಆಕಸ್ಮಿಕವಾಗಿ ಹಾರಿದ ಗುಂಡು ಲೋಕೇಶ್‌ಗೆ ತಗುಲಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟ ದರ್ಶನ್ ವಿರುದ್ಧ ಆಕ್ರೋಶ, ವೀರಶೈವ ಸಮಾಜದಿಂದ ಹೋರಾಟ, ಯಾರೆಲ್ಲ ಏನೇನು ಹೇಳಿದರು?






