ತಂತಿ ಬೇಲಿ ಕರೆಂಟ್ ಶಾಕ್, ಕಾಡಾನೆಗಳ ಸಾವು, ಗ್ರಾಮಸ್ಥರು ಏನಂತಾರೆ? ಅರಣ್ಯಾಧಿಕಾರಿಗಳ ವಾದವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಎರಡು ಕಾಡಾನೆಗಳು (WILD ELEPHANTS) ಸಾವನ್ನಪ್ಪಿವೆ. ಘಟನೆ ಮಾಹಿತಿ ಲಭಿಸುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜಮೀನು ಮಾಲೀಕನನ್ನು ವಶಕ್ಕೆ ಪಡೆಯದು, ವಿಚಾರಣೆ ನಡೆಸಲಾಗುತ್ತಿದೆ.

Shimoga Nanjappa Hospital

ಆಯನೂರು ಸಮೀಪದ ಚನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಎರಡು ಗಂಡು ಕಾಡಾನೆಗಳು ಈ ಭಾಗದಲ್ಲಿ ಜೋಳದ ಹೊಲಕ್ಕೆ ನುಗ್ಗಲು ಯತ್ನಿಸಿವೆ. ಜಮೀನಿಗೆ ಹಾಕಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿವೆ.

ಬೆಳೆ ರಕ್ಷಣೆಗೆ ಹಾಕಿದ್ದು ಜೀವ ತೆಗೆಯಿತು wild elephants

ಚನ್ನಹಳ್ಳಿ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಹಂದಿ, ಜಿಂಕೆ ಸೇರಿದಂತೆ ವಿವಿಧ ಪ್ರಾಣಿಗಳು ಜಮೀನಿಗೆ ನುಗ್ಗುತ್ತಿವೆ. ಸುಮಾರು ಒಂದು ವರ್ಷದಿಂದ ಕಾಡಾನೆ (WILD ELEPHANTS) ಹಾವಳಿಯು ಹೆಚ್ಚಾಗಿದೆ. ವನ್ಯಜೀವಿಗಳಿಂದ ತಮ್ಮ ಬೆಳೆ ರಕ್ಷಣೆಗೆ ರೈತರು ವಿದ್ಯುತ್ ತಂತಿ ಬೇಲಿಗಳನ್ನು ಅಳವಡಿಸಿಕೊಂಡಿದ್ದಾರೆ. ಚಂದ್ರಾನಾಯ್ಕ್ ಎಂಬುವವರು ಜಮೀನಿನಲ್ಲಿ ಬೆಳೆದಿದ್ದ ಜೋಳದ ರಕ್ಷಣೆಗೆ ತಂತಿ ಬೇಲಿ ಹಾಕಿ, ನೇರವಾಗಿ ವಿದ್ಯುತ್ ಹರಿಬಿಟ್ಟಿದ್ದರು. ಇದಕ್ಕೆ ತಾಗಿ ಎರಡು ಗಂಡು ಕಾಡಾನೆಗಳು ಸಾವನ್ನಪ್ಪಿವೆ.

ಆನೆ ಹಾವಳಿ ತಪ್ಪಿಸುವಂತೆ ಆಗ್ರಹಿಸಿದ್ದರು wild elephants

ಚನ್ನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ನಿರಂತರವಾಗಿದೆ. ಇದಕ್ಕೆ ಮುಕ್ತಿ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಪ್ರತಿಭಟನೆಗಳನ್ನು ನಡೆಸಿದ್ದರು. ಆದರೆ ಈತನಕ ಯಾವುದೆ ಪ್ರಯೋಜನವಾಗಿರಲಿಲ್ಲ.

‘ಬೆಳೆ ಕೈಗೆ ಬಂದರಷ್ಟೆ ನಮ್ಮ ಬದುಕು ನಡೆಯುವುದು. ಕಾಡು ಪ್ರಾಣಿಗಳಿಂದಾಗಿ ಬೆಳೆ ಸಂಪೂರ್ಣ ಹಾಳುಗುತ್ತಿದೆ. ಇದಕ್ಕೆ ಸರ್ಕಾರ ಪರಿಹಾರ ಕೊಡುವುದಿಲ್ಲ. ನಮ್ಮ ಬೆಳೆ ನಾವು ರಕ್ಷಣೆ ಮಾಡಿಕೊಳ್ಳುವುದಕ್ಕೆ ತಂತಿ ಬೇಲಿ ಹಾಕಿಕೊಳ್ಳಬೇಕಾಗಿದೆ. ಈಗ ಆನೆಗಳು ಸತ್ತಿವೆ. ಚಂದ್ರನಾಯ್ಕ ತುಂಬಾ ಕಷ್ಟದಲ್ಲಿದ್ದಾನೆ. ಆತನ ಕುಟುಂಬದವರ ಭವಿಷ್ಯವೇನು. ಅರಣ್ಯ ಇಲಾಖೆ ತಮ್ಮ ತಪ್ಪು ಒಪ್ಪೋದಿಲ್ಲ. ನಮ್ಮ ಮೇಲೆಷ್ಟೆ ಆಪಾದನೆ ಮಾಡುತ್ತದೆ’ಗ್ರಾಮಸ್ಥರು

ಕಾಡ್ಗಿಚ್ಚಿನಂತೆ ಹಬ್ಬಿದ ವಿಚಾರ

ಜಮೀನಿಗೆ ತಂತಿ ಬೇಲಿ ಅಳವಡಿಕೆ ಕುರಿತು ನಿಯಮವಿದೆ. ಆದರೆ ಈ ಭಾಗದಲ್ಲಿ ಬಹುತೇಕ ರೈತರಿಗೆ ನಿಯಮದ ಅರಿವಿಲ್ಲ, ಗೊತ್ತಿದ್ದವರು ಕ್ಯಾರೆ ಅನ್ನುತ್ತಿಲ್ಲ. ನೇರವಾಗಿ ತಂತಿ ಬೇಲಿಗೆ ವಿದ್ಯುತ್ ಕೊಡುತ್ತಿದ್ದಾರೆ. ಇದು ಕಾಡು ಪ್ರಾಣಿಗಳಿಗಷ್ಟೆ ಅಲ್ಲ, ಮನುಷ್ಯರಿಗು ಆಪತ್ತು ಉಂಟು ಮಾಡಲಿದೆ.
ತಂತಿ ಬೇಲಿಯಿಂದಾಗಿ ಎರಡು ಕಾಡಾನೆಗಳು (WILD ELEPHANTS) ಅಕ್ಕಪಕ್ಕದಲ್ಲಿ ಮೃತಪಟ್ಟಿವೆ. ಇದರ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ರೈತ ವಶಕ್ಕೆ, ವಿಚಾರಣೆ ಆರಂಭ

ಚನ್ನಹಳ್ಳಿ ಗ್ರಾಮಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯತ್ ಸ್ಪರ್ಶದಿಂದಲೆ ಆನೆಗಳು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡರು. ಅಲ್ಲದೆ ಆನೆಗಳ ಶವ ಪರೀಕ್ಷೆ ಮತ್ತು ಸಂಸ್ಕಾರಕ್ಕೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಇದೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಸಿಎಫ್ ಶಂಕರ್ ಅವರು, ‘ಸುಮಾರು 10 ವರ್ಷದ ಎರಡು ಆನೆಗಳು ತಂತಿ ಬೇಲಿಗೆ ಹಾಕಿದ್ದ ವಿದ್ಯುತ್ ತಾಗಿ ಮೃತಪಟ್ಟಿವೆ. ಕಂಬ ಮತ್ತು ತಂತಿ ಕೂಡ ಸ್ಥಳದಲ್ಲಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕರ ಇದು ಘೋರ ಅಪರಾಧ’ ಎಂದು ತಿಳಿಸಿದರು.

Shimoga Nanjappa Hospital

ವಿದ್ಯುತ್ ಕಾಯ್ದೆ ಅಡಿಯು ಕೇಸ್

ತಂತಿ ಬೇಲಿಗೆ ನೇರವಾಗಿ ವಿದ್ಯುತ್ ಹರಿಸಲಾಗುತ್ತದೆ. ಆನೆಗಳ ಸಾವಿಗೆ ಇದೆ ಕಾರಣ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳುತ್ತಿದ್ದಾರೆ. ಹಾಗಾಗಿ ರೈತ ಚಂದ್ರಾನಾಯ್ಕ್ ವಿರುದ್ಧ ವಿದ್ಯುತ್ ಕಾಯ್ದೆ ಅಡಿಯು ಪ್ರಕರಣ ದಾಖಲಿಸಲು ಅರಣ್ಯಾಧಿಕಾರಿಗಳು ಚಿಂತಿಸಿದ್ದಾರೆ.

‘ತಂತಿ ಬೇಲಿಗೆ ನೇರವಾಗಿ ವಿದ್ಯುತ್ ಹರಿಸುವುದು ಅಪರಾಧ. ಹಾಗಾಗಿ ಆರೋಪಿ ವಿರುದ್ಧ ವಿದ್ಯುತ್ ಕಾಯ್ದೆ ಅಡಿಯು ಪ್ರಕರಣ ದಾಖಲು ಮಾಡುತ್ತೇವೆ. ಸೋಲಾರ್ ಮೂಲಕ ತಂತಿ ಬೇಲಿಗೆ ವಿದ್ಯುತ್ ಹರಿಸಬಹುದು. ನೇರವಾಗಿ ಹರಿಸವುದರಿಂದ ವನ್ಯಜೀವಿಗಳಿಗೆ ಸಮಸ್ಯೆ ಉಂಟಾಗಲಿದೆ’ಶಂಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ

ಎರಡು ಕಾಡಾನೆಗಳ ಸಾವು ಪ್ರಕರಣ ಈ ಭಾಗದಲ್ಲಿ ತಲ್ಲಣ ಸೃಷ್ಟಿಸಿದೆ. ತಂತಿ ಬೇಲಿಗೆ ನೇರವಾಗಿ ವಿದ್ಯುತ್ ಹರಿಸುವವರಿಗೆ ಆತಂಕ ಮೂಡಿಸಿದೆ. ಸದ್ಯ ಆನೆಗಳ ಅಂತ್ಯ ಸಂಸ್ಕಾರಕ್ಕೆ ಸ್ಥಳದಲ್ಲೆ ವ್ಯವಸ್ಥೆ ಮಾಡಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment