ಶಿವಮೊಗ್ಗದ ಗಾಜನೂರಿನಲ್ಲಿ ಬಾರ್ ಗೋಡೆ ಕೊರೆದ ಕಳ್ಳರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲಾಕ್‌ಡೌನ್‌ ಹಿನ್ನೆಲೆ ದೇಶಾದ್ಯಂತ ಮದ್ಯ ಮಾರಾಟ ಬಂದ್‌ ಆಗಿದೆ. ಇದರಿಂದ ಮದ್ಯ ಪ್ರಿಯರು ಪರಿತಪಿಸುತ್ತಿದ್ದಾರೆ. ಈ ನಡುವೆ ಬಾರ್‌, ವೈನ್‌ ಶಾಪ್‌ಗಳ ಗೋಡೆ ಕೊರೆದು, ಬಾಟಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಶಿವಮೊಗ್ಗ ತಾಲೂಕು ಗಾಜನೂರಿನಲ್ಲೂ ಇಂಥದ್ದೇ ಪ್ರಕರಣ ನಡೆದಿದೆ.

ಗೋಡೆ ಕೊರೆದು ಎಣ್ಣೆ ಹಾರಿಸಲು ಪ್ಲಾನ್‌

ಗಾಜನೂರಿನ ಸ್ನೇಹ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಬಾರ್‌ನ ಗೋಡೆ ಕೊರೆದು ಕಳ್ಳರು ಒಳ ನುಗ್ಗಲು ಯತ್ನಿಸಿದ್ದಾರೆ. ಆದರೆ ಇವರ ಪ್ರಯತ್ನ ಫಲ ಕೊಟ್ಟಿಲ್ಲ. ಹಾಗಾಗಿ ಕಳ್ಳರು ಬರಿಗೈಯಲ್ಲಿ ಹಿಂತಿರುಗುವಂತಾಗಿದೆ.

ಮಾಲೀಕರು ಇವತ್ತು ಬಾರ್‌ ಕಡೆಗೆ ಬಂದಾಗ ಕನ್ನ ಕೊರೆದಿರುವುದು ಬೆಳಕಿಗೆ ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment