
ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020
ಲಾಕ್‌ಡೌನ್ ಹಿನ್ನೆಲೆ ದೇಶಾದ್ಯಂತ ಮದ್ಯ ಮಾರಾಟ ಬಂದ್ ಆಗಿದೆ. ಇದರಿಂದ ಮದ್ಯ ಪ್ರಿಯರು ಪರಿತಪಿಸುತ್ತಿದ್ದಾರೆ. ಈ ನಡುವೆ ಬಾರ್, ವೈನ್ ಶಾಪ್‌ಗಳ ಗೋಡೆ ಕೊರೆದು, ಬಾಟಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಶಿವಮೊಗ್ಗ ತಾಲೂಕು ಗಾಜನೂರಿನಲ್ಲೂ ಇಂಥದ್ದೇ ಪ್ರಕರಣ ನಡೆದಿದೆ.
ಗೋಡೆ ಕೊರೆದು ಎಣ್ಣೆ ಹಾರಿಸಲು ಪ್ಲಾನ್
ಗಾಜನೂರಿನ ಸ್ನೇಹ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಮದ್ಯ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಬಾರ್‌ನ ಗೋಡೆ ಕೊರೆದು ಕಳ್ಳರು ಒಳ ನುಗ್ಗಲು ಯತ್ನಿಸಿದ್ದಾರೆ. ಆದರೆ ಇವರ ಪ್ರಯತ್ನ ಫಲ ಕೊಟ್ಟಿಲ್ಲ. ಹಾಗಾಗಿ ಕಳ್ಳರು ಬರಿಗೈಯಲ್ಲಿ ಹಿಂತಿರುಗುವಂತಾಗಿದೆ.
ಮಾಲೀಕರು ಇವತ್ತು ಬಾರ್ ಕಡೆಗೆ ಬಂದಾಗ ಕನ್ನ ಕೊರೆದಿರುವುದು ಬೆಳಕಿಗೆ ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]