ಶಿವಮೊಗ್ಗ: ತಾಲ್ಲೂಕಿನ ಗೊಂದಿಚಟ್ನಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿವಮೊಗ್ಗದ ಗ್ಯಾಲಘರ್ ಸಂಸ್ಥೆಯ ಸಿಎಸ್ಆರ್ ಅನುದಾನದಡಿ ನೀಡಲಾದ ಕಲಿಕಾ ಸಾಮಗ್ರಿಗಳು ಹಾಗೂ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸರ್ಕಾರೇತರ ಸಂಸ್ಥೆ ಇಂಡಿಯಾ ಸುಧಾರ್ ಸಹಯೋಗದಲ್ಲಿ ಶಾಲೆಯ ಮಕ್ಕಳಿಗೆ ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳು, 26 ಡೆಸ್ಕ್, ಚೇರ್ಗಳು ಹಾಗೂ ಆಲ್ಮೆರಾಗಳನ್ನು ಕೊಡುಗೆಯಾಗಿ ವಿತರಿಸಲಾಯಿತು.

ಸಾಮಗ್ರಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಗ್ಯಾಲಘರ್ ಸಂಸ್ಥೆಯ ಮುಖ್ಯಸ್ಥರಾದ ಪ್ರೀತಿ, ಶಿವಕುಮಾರ್, ಜಯಂತ್ ಹಾಗೂ 100ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು. ಇಂಡಿಯಾ ಸುಧಾರ್ ಸಂಸ್ಥೆಯ ಕಿರಣ್, ದೀಪ, ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಜಿಪಿಟಿ ಶಿಕ್ಷಕ ಯುಗಪುರುಷ ಕಾರ್ಯಕ್ರಮ ನಿರೂಪಿಸಿದರು. ತಿಮ್ಮಪ್ಪ ಎಂ.ಎಸ್. ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.