ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 DECEMBER 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ.
2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು.
(gamaka expert)
ಗೊತ್ತಿರಲೇಬೇಕಾದ 4 ವಿಚಾರಗಳು
1 ಹೆಚ್.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ ರಾಮಸ್ವಾಮಿ ಶಾಸ್ತ್ರಿ–ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು. 2 ರಾಜ್ಯ, ದೇಶದ ಹಲವೆಡೆ ಕಾರ್ಯಕ್ರಮಗಳಲ್ಲಿ ಗಮಕ ವಾಚನ ಮಾಡಿದ್ದಾರೆ. 100ಕ್ಕೂ ಹೆಚ್ಚು ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ. ಹಲವು ಪ್ರಶಸ್ತಿಗಳು ಕೂಡ ಇವರನ್ನ ಅರಸಿ ಬಂದಿವೆ. 3 ಹೆಚ್.ಆರ್.ಕೇಶವಮೂರ್ತಿ ಮತ್ತು ಡಾ. ಮತ್ತೂರು ಕೃಷ್ಣಮೂರ್ತಿ ಅವರ ಜೋಡಿ ಪ್ರಖ್ಯಾತಿ ಪಡೆದಿತ್ತು. ಉದಯ ಟಿವಿಯಲ್ಲಿ ಇವರು ನಡೆಸುತ್ತಿದ್ದ ಕುಮಾರವ್ಯಾಸ ಭಾರತ ಕಾರ್ಯಕ್ರಮ ದೊಡ್ಡ ಸಂಖ್ಯೆ ಜನರನ್ನು ತಲುಪಿತ್ತು. ಡಾ.ಮತ್ತೂರು ಕೃಷ್ಣಮೂರ್ತಿ ಅವರು ಸಂಸ್ಕೃತ ಗ್ರಾಮ ಮತ್ತೂರಿನವರು. ಹೆಚ್.ಆರ್.ಕೇಶವಮೂರ್ತಿ ಅವರ ಗಮಕ ಗ್ರಾಮ ಹೊಸಹಳ್ಳಿಯವರು. ಇವೆರಡು ಅವಳಿ ಗ್ರಾಮಗಳಾಗಿವೆ. 4 ಕುಮಾರವ್ಯಾಸ ಭಾರತ, ಜೈಮಿನಿ ಭಾರತ, ಪಂಪನ ಮಹಾ ಭಾರತ, ರನ್ನನ ಗಧಾಯುದ್ಧ, ರಘುವಂಶ, ಕುಮಾರಸಂಭವದ ಶ್ಲೋಕಗಳಿಗೆ ರಾಗ ಸಂಯೋಜನೆ ಮಾಡಿ ಆರು ದಶಕಗಳ ಕಾಲ ಗಮಕವನ್ನು ದೇಶದೆಲ್ಲೆಡೆ ಪಸರಿಸಿದ್ದಾರೆ. ಕುಮಾರವ್ಯಾಸ ಭಾರತದ 135 ಧ್ವನಿ ಸುರುಳಿಗಳು, ಮಾರ್ಕಂಡೇಯ ಅವಧಾನಿ ಅವರ ವ್ಯಾಖ್ಯಾನದೊಂದಿಗೆ 35 ಧ್ವನಿ ಸುರುಳಿಗಳಲ್ಲಿ ಜೈಮಿನಿ ಭಾರತ ಹೊರ ಬಂದಿದೆ. ಕುಮಾರವ್ಯಾಸ ಭಾರತದ 200 ಕ್ಯಾಸೆಟ್ಟುಗಳನ್ನು ಹೊರ ತಂದಿದ್ದಾರೆ.ALSO READ – ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?