ಕುಂಸಿಯಲ್ಲಿ ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?

 ಶಿವಮೊಗ್ಗ  LIVE 

ಶಿವಮೊಗ್ಗ: ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಎಲೆಕ್ಟ್ರಿಷಿಯನ್ ಸಮೀಉಲ್ಲಾ ಅವರ ಮನೆಯಲ್ಲಿ ಕಳ್ಳತನವಾಗಿದೆ (GOLD).

ಇದನ್ನೂ ಓದಿ » ₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?

ಜನವರಿ 3ರಂದು ಸಮೀಉಲ್ಲಾ ಮತ್ತು ಅವರ ಮಗ ಕೆಲಸಕ್ಕೆ ಹೋಗಿದ್ದರು. ಮಗಳು ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನದ ಹೊತ್ತಿಗೆ ಪತ್ನಿಯೂ ಮದುವೆ ಸಮಾರಂಭಕ್ಕೆ ಹೋಗಿದ್ದರು. ಸಂಜೆ ಮಗಳು ಕಾಲೇಜಿನಿಂದ ಮನೆಗೆ ವಾಪಸ್ ಬಂದು ನೋಡಿದಾಗ ಮನೆಯ ಹಂಚುಗಳನ್ನು ತೆಗೆದಿರುವುದು ಗಮನಕ್ಕೆ ಬಂದಿದೆ. ಒಳಗೆ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು ಎಂದು ಆರೋಪಿಸಲಾಗಿದೆ. 

ಬೀರುವಿನಲ್ಲಿದ್ದ ಒಂದು ಜೊತೆ ಓಲೆ, ಮೂರು ಉಂಗುರಗಳು ಸೇರಿ ಅಂದಾಜು ₹1,40,000 ಮೌಲ್ಯದ ಸುಮಾರು 19 ಗ್ರಾಂ ತೂಕದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕುಂಸಿ ಠಾಣಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment