ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರೈತರೊಬ್ಬರನ್ನು (Farmer) ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್ ರಸ್ತೆಯಲ್ಲಿ ಅಪಘಾತವಾಗಿದೆ.
ಹೇಗಾಯ್ತು ಘಟನೆ?
ಹೊಳೆಬೆನವಳ್ಳಿಯ ಯಶವಂತಪ್ಪ ದನಗಳಿಗೆ ಹುಲ್ಲು ತರಲು ಟಿವಿಎಸ್ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭ ಗೂಡ್ಸ್ ವಾಹನ ಡಿಕ್ಕಿ ಹೊಡೆದು ತಲೆ ಭಾಗ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸಕ್ರೆಬೈಲು ಸಮೀಪ ಅವರ ಉಸಿರಾಟದಲ್ಲಿ ತೀವ್ರ ಸಮಸ್ಯೆಯಾಗಿತ್ತು. ಹಾಗಾಗಿ ಮೆಗ್ಗಾನ್ ಆಸ್ಪತ್ರೆಗೆ ಮರಳಿ ಕರೆತಂದು ಪರೀಕ್ಷಿಸಿದಾಗ ಯಶವಂತಪ್ಪ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಗೂಡ್ಸ್ ವಾಹನ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















