ದನಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ರೈತ ಮೃತದೇಹವಾಗಿ ಮನೆಗೆ, ಆಗಿದ್ದೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

Published On: 27 October 2025 | Monday

ಶಿವಮೊಗ್ಗ: ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರೈತರೊಬ್ಬರನ್ನು (Farmer) ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್‌ ರಸ್ತೆಯಲ್ಲಿ ಅಪಘಾತವಾಗಿದೆ.

ಹೇಗಾಯ್ತು ಘಟನೆ?

ಹೊಳೆಬೆನವಳ್ಳಿಯ ಯಶವಂತಪ್ಪ ದನಗಳಿಗೆ ಹುಲ್ಲು ತರಲು ಟಿವಿಎಸ್‌ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ತಲೆ ಭಾಗ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸಕ್ರೆಬೈಲು ಸಮೀಪ ಅವರ ಉಸಿರಾಟದಲ್ಲಿ ತೀವ್ರ ಸಮಸ್ಯೆಯಾಗಿತ್ತು. ಹಾಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ಮರಳಿ ಕರೆತಂದು ಪರೀಕ್ಷಿಸಿದಾಗ ಯಶವಂತಪ್ಪ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಗೂಡ್ಸ್‌ ವಾಹನ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Police-Jeep-at-Shimoga-General-Image

ಇದನ್ನೂ ಓದಿ » ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್‌ ಆಗಿದ್ದ ಆರೋಪಿ ಅರೆಸ್ಟ್‌

Leave a Comment