ಆಯನೂರು ಬಳಿ ಕ್ರೇಟಾ ಕಾರು, ಓಮಿನಿ ಮಧ್ಯೆ ಡಿಕ್ಕಿ, ಏಳು ಮಂದಿಗೆ ಗಾಯ

ಶಿವಮೊಗ್ಗ: ಕ್ರೇಟಾ ಕಾರು ಹಾಗೂ ಓಮಿನಿ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ (head-on) ಏಳು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಆಯನೂರು ಹಾಗೂ ಚನ್ನಹಳ್ಳಿ ಮಧ್ಯೆ ಸಾಗರ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.

ಇದನ್ನೂ ಓದಿ : ವಿದೇಶದಿಂದ ಹಣದ ನೆರವಿನ ಭರವಸೆ, ಶಿವಮೊಗ್ಗ ಜಿಲ್ಲೆಯ ಮಹಿಳೆಗೆ ಲಕ್ಷ ಲಕ್ಷ ವಂಚನೆ

Omni-Car-Incident-near-Ayanuru-in-Shimoga-taluk

ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕ್ರೇಟಾ ಕಾರು ಹಾಗೂ ಶಿವಮೊಗ್ಗದಿಂದ ಆಯನೂರು ಕಡೆಗೆ ಹೋಗುತ್ತಿದ್ದ ಓಮಿನಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓಮಿನಿ ವಾಹನದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತವಾದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ವಾಹನದಿಂದ ಹೊರಗೆ ಕರೆತಂದು ಆಸ್ಪತ್ರೆಗೆ ರವಾನಿಸಲು ನೆರವಾದರು.

Omni-Car-Incident-near-Ayanuru-in-Shimoga-taluk

ಮಾಜಿ ಮಿನಿಸ್ಟರ್‌ ಮಾನವೀಯತೆ

ಶಿವಮೊಗ್ಗದಿಂದ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಘಟನಾ ಸ್ಥಳದಲ್ಲಿ ವಾಹನ ನಿಲ್ಲಿಸಿ ಗಾಯಾಳುಗಳ ನೆರವಿಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.

Omni-Car-Incident-near-Ayanuru-in-Shimoga-taluk

ಇನ್ನು, ಕುಂಸಿ ಠಾಣೆ ಪೊಲೀಸರು ತಮ್ಮ ಜೀಪ್‌ನಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment