ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 FEBRURARY 2023
SHIMOGA : ವಿಮಾನ ನಿಲ್ದಾಣ ಉದ್ಘಾಟನೆಗೆ (Airport Inauguration) ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಪ್ರಧಾನಿಗೆ ಭವ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಶಿವರಾತ್ರಿಯಂದು ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ವೇದಿಕೆ ಭೂಮಿ ಪೂಜೆ ಕಾರ್ಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಸ್.ರುದ್ರೇಗೌಡ, ಕೆ.ಬಿ.ಅಶೋಕ್ ನಾಯ್ಕ್ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೋದಿ ಭೇಟಿ ಖಚಿತ, ಸಮಯ ಗೊತ್ತಾಗಬೇಕು
ಇದೆ ವೇಳೆ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಫೆ.27ರಂದು ವಿಮಾನ ನಿಲ್ದಾಣ ಉದ್ಘಾಟನೆಗೆ ಭೇಟಿ ನೀಡುವುದು ನಿಗದಿಯಾಗಿದೆ. ಆದರೆ ಅವರು ಯಾವ ಸಮಯಕ್ಕೆ ಬರುತ್ತಾರೆ ಅನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ. ಹಾಗಾಗಿ ಕಾರ್ಯಕ್ರಮದ ಸಮಯ ಇನ್ನೂ ನಿಗದಿಯಾಗಿಲ್ಲ. ವೇದಿಕೆ ಕಾರ್ಯಕ್ರಮ ಹೊರತು ಬೇರಾವ ಕಾರ್ಯಕ್ರಮವು ಇಲ್ಲ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಂದ ತೆರಳುವರು ಎಂದು ತಿಳಿಸಿದರು.
ಇದನ್ನೂ ಓದಿ – ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ, ಹೋರಾಟ, ಯಾರೆಲ್ಲರ ಹೆಸರು ಮುನ್ನೆಲೆಗೆ ಬಂದಿದೆ?
ಬೃಹತ್ ವೇದಿಕೆ ನಿರ್ಮಾಣ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ವಿಮಾನ ನಿಲ್ದಾಣದ (Airport Inauguration) ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಗೇಟಿನ ಬಲ ಭಾಗದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ. 100 ಅಡಿಯ ಮುಖ್ಯ ವೇದಿಕೆ ನಿರ್ಮಿಸಲಾಗಿದೆ. ಒಂದು ಲಕ್ಷ ಜನಕ್ಕೆ ಖರ್ಚಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರಖರ ಬಿಸಿಲು ಇರುವುದರಿಂದ ವಾಟರ್ ಪ್ರೂಫ್ ಶೆಲ್ಟರ್ ನಿರ್ಮಿಸಲಾಗುತ್ತದೆ. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುತ್ತದೆ. ಇನ್ನು, ಅತಿಥಿಗಳು ವಿರಮಿಸಲು ಗ್ರೀನ್ ರೂಂ. ಕಲಾವಿದರು ಕಾರ್ಯಕ್ರಮ ನಡೆಸಿಕೊಡಲು ಸಕೆಂಡರಿ ವೇದಿಕೆ ನಿರ್ಮಿಸಲಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಹೈ ಸೆಕ್ಯೂರಿಟಿ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯ ಕೈಗಾರಿಕೆ ಭದ್ರತಾ ಪಡೆ (KSISF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಿಲ್ದಾಣದ ಆವರಣಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್, ಕಾಂಪೌಂಡ್ ಸುತ್ತಲು KSISF ಸಿಬ್ಬಂದಿ ನಿಯೋಜಿಸಲಾಗಿದೆ. ಇನ್ನು, ಕಾರ್ಯಕ್ರಮದ ಆವರಣದಲ್ಲಿ ಬಾಂಬ್ ಸ್ಕ್ವಾಡ್, ಶ್ವಾನ ದಳವನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ವಾರ ಅತ್ಯಂತ ಮಹತ್ವದ್ದು, ಕಾರಣವೇನು? ಮೊದಲು ಲ್ಯಾಂಡ್ ಆಗುವ ವಿಮಾನ ಯಾವುದು?