ಶಿವಮೊಗ್ಗ: ಗಾಜನೂರು ರಸ್ತೆಯ ಹೊಸಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು (hit-and-run) ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಜನೂರು ನಿವಾಸಿ ಲಕ್ಷ್ಮಣ ಎಂಬುವವರು ಗಾಯಗೊಂಡಿದ್ದಾರೆ.
ಲಕ್ಷ್ಮಣ ಅವರು ಸಂಜೆ ವೇಳೆಗೆ ಬೈಕಿನಲ್ಲಿ ಹೊಸಹಳ್ಳಿಯಿಂದ ಗಾಜನೂರು ಕಡೆಗೆ ತೆರಳುತ್ತಿದ್ದರು. ಗಾಜನೂರು ಕಡೆಯಿಂದ ವೇಗವಾಗಿ ಬಂದ ವಾಹನವೊಂದು ಲಕ್ಷ್ಮಣ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಅವರ ತಲೆ ಹಾಗೂ ಕೈಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ