ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಹಿಟ್ ಅಂಡ್ ರನ್‍ ಅಪಘಾತ, ಒಬ್ಬ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 15 APRIL 2023

SHIMOGA : ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬ ಬೈಕ್ ಸವಾರ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದು, ಹಿಟ್ ಅಂಡ್ ರನ್ (Hit and Run) ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ACCIDENT-NEWS-GENERAL-IMAGE.

ಶಿವಮೊಗ್ಗದ ತ್ಯಾವರೆಕೊಪ್ಪದ ಸಿಂಹಧಾಮದ (Lion Safari) ಬಳಿ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿಯ ರಮೇಶ್ (43) ಮೃತಪಟ್ಟಿದ್ದಾನೆ. ಶಿವಮೊಗ್ಗದ ಚಿನ್ಮನೆ (Chinmane) ಗ್ರಾಮದ ಸುನಿಲ್ ಮತ್ತು ಮಂಜುನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ.

ಹೇಗಾಯ್ತು ಘಟನೆ?

ಸುನಿಲ್ ಮತ್ತು ಮಂಜುನಾಥ್ ಪ್ರತಿದಿನ ಶಿವಮೊಗ್ಗಕ್ಕೆ ಬಂದು ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಏ.12ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಸುನಿಲ್ ತನ್ನ ಡಿಸ್ಕವರ್‍ ಬೈಕ್‍ ಚಲಾಯಿಸುತ್ತಿದ್ದ. ಮಂಜುನಾಥ್ ಮತ್ತು ರಮೇಶ್ ಹಿಂಬದಿ ಕುಳಿತಿದ್ದರು. ಸಿಂಹಧಾಮದ ಬಳಿ ಇವರು ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

shivamogga live news whatsappa number

ಗಾಯಾಳು ರಮೇಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುನಿಲನ ತಲೆ, ಎದೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಮಂಜುನಾಥ್‍ ಅವರ ಕಾಲು ಮುರಿದಿದೆ. ಇಬ್ಬರಿಗೂ ಚಿಕಿತ್ಸೆ ಮುಂದುವರೆದಿದೆ. ಕಾರು ಚಾಲಕ ಅಪಘಾತದ ಬಳಿಕ ಕಾರು ನಿಲ್ಲಿಸದೆ (Hit and Run) ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಅಮೆರಿಕಾದಿಂದ ಬಂದ ಫೇಸ್‌ಬುಕ್‌ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಶಿವಮೊಗ್ಗದ ಯುವಕನಿಗೆ ಕಾದಿತ್ತು ಶಾಕ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment