ಶಿವಮೊಗ್ಗ – ರಿಪ್ಪನ್ ಪೇಟೆ ರಸ್ತೆಯಲ್ಲಿ ಹಿಟ್ ಅಂಡ್ ರನ್ ಕೇಸ್, ಬೈಕ್ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಕಾರು, ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಚಾಲಕ ಕಾರನ್ನು ನಿಲ್ಲಿಸದೆ (HIT AND RUN) ಪರಾರಿಯಾಗಿದ್ದಾನೆ.

Shimoga Nanjappa Hospital

ಬೈಕ್ ಸವಾರ ಸುರೇಂದ್ರ (45) ಮೃತ ದುರ್ದೈವಿ. ಹೊಸನಗರ ತಾಲೂಕು ಅರಸಾಳು ಗ್ರಾಮದ ತಮ್ಮಡಿಕೊಪ್ಪದಿಂದ ಸುರೇಂದ್ರ ಅವರು ಬೈಕಿನಲ್ಲಿ ಶಿವಮೊಗ್ಗದ ಕಡೆಗೆ ಬರುತ್ತಿದ್ದರು. ಮಂಡಘಟ್ಟದ ಬಳಿ ಕಾರೊಂದು ಸುರೇಂದ್ರ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ.

ಅಪಘಾತದವಾದರೂ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದವರು ಸುರೇಂದ್ರ ಅವರನ್ನ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆ ವೇಳೆಗಾಗಲೆ ಸುರೇಂದ್ರ ಅವರು ಕೊನೆಯುಸಿರೆಳೆದಿದ್ದರು.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೀಡಿಯಾ ಹೌಸ್ ಸ್ಥಾಪನೆ, ಇವತ್ತಿಂದ ಚಾಲನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment