ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಅಪಘಾತ, ಗಾಡಿಕೊಪ್ಪದ ಯುವಕ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಗರದ ಗಾಡಿಕೊಪ್ಪ ನಿವಾಸಿ, ಖಾಸಗಿ ಬಸ್ ಚಾಲಕ ವೀರೇಶ್ (28) ಮೃತ ವ್ಯಕ್ತಿ. ಬೆಂಗಳೂರು – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಬೆಳಗಿನ ಜಾವ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ವೀರೇಶ್‌ ತೆರಳುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವೀರೇಶ್ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road-Accident-at-Veeragarana-Byranakoppa-at-Ayanuru-Road.