ಪಿಳ್ಳಂಗೆರೆಯಲ್ಲಿ ಚಿನ್ನಾಭರಣ ಕಳ್ಳತನ, ಹೇಗಾಯ್ತು ಘಟನೆ?

 ಶಿವಮೊಗ್ಗ  LIVE 

ಶಿವಮೊಗ್ಗ: ಮನೆಯೊಂದರ ಬೀಗ ಮುರಿದು (House burglary) ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಯಾರು ಇಲ್ಲದ ಸಮಯ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಉದ್ಯಮಿಗಳೇ ಹುಷಾರ್‌, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?

ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಇಕ್ಬಾಲ್‌ ಅಹಮದ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿಟ್ಟಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ನೆಕ್ಲೇಸ್, ಮಕ್ಕಳ ಚಿನ್ನದ ಉಂಗುರಗಳು, ಕಿವಿ ಓಲೆ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಲಾಗಿದೆ.

ಸುಮಾರು ₹51,300 ಮೌಲ್ಯದ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment