ಶಿವಮೊಗ್ಗದಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 5 NOVEMBER 2022

SHIMOGA | ಪತಿ, ಪತ್ನಿ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. (husband kills wife)

Shimoga Nanjappa Hospital

ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಶೋಭಾ (50) ಎಂಬುವವರ ಹತ್ಯೆ ಮಾಡಲಾಗಿದೆ. ಪತಿ ಪ್ರಕಾಶ್ ಇಂದು ಬೆಳಗ್ಗೆ ಶೋಭಾ ಅವರ ಕೊಲೆ ಮಾಡಿ ಪರಾರಿಯಾಗಿದ್ದ. ಕೆಲವೆ ಗಂಟೆಯಲ್ಲಿ ಪೊಲೀಸರು ಪ್ರಕಾಶನನ್ನು ಬಂಧಿಸಿದ್ದಾರೆ.

(husband kills wife)

ಬರ್ಬರವಾಗಿ ನಡೆದ ಹತ್ಯೆ

ದಂಪತಿ ನಡುವೆ ಕೌಟುಂಬಿಕ ವೈಮನಸ್ಸು ಇದ್ದಿದ್ದರಿಂದ ಇಬ್ಬರು ಪ್ರತ್ಯೇಕವಾಗಿ ವಾಸವಾಗಿದ್ದರು. ಈಚೆಗೆ ಪತಿ ಪ್ರಕಾಶ್ ವಿರುದ್ಧ ಶೋಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಹಿಂಪಡೆಯುವಂತೆ ಪ್ರಕಾಶ್ ಪೀಡಿಸುತ್ತಿದ್ದ ಎಂದು ಆರೋಪಿಸಾಗಿದೆ. ಇದೆ ವಿಚಾರವಾಗಿ ಹತ್ಯೆ ನಡೆದಿರುವ ಕುರಿತು ಸಂಬಂಧಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಇವತ್ತು ಶೋಭಾಳ ಮನೆಯೊಳಗೆ ನುಗ್ಗಿರುವ ಪ್ರಕಾಶ್ ಹತ್ಯೆ ಮಾಡಿ ಪರಾರಿಯಾಗಿದ್ದ. ಮೃತದೇಹದ ಪಕ್ಕದಲ್ಲಿ ಖಾರದ ಪುಡಿ, ಇಟ್ಟಿಗೆ, ಎರಡು ಚಾಕು ಪತ್ತೆಯಾಗಿವೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕಾಶನನ್ನು ಪತ್ತೆ ಹಚ್ಚಿದ್ದಾರೆ. (husband kills wife)

ದಂಪತಿಗೆ ಮಗಳಿದ್ದು, ಆಕೆಗೆ ವಿವಾಹವಾಗಿದೆ. 9 ತಿಂಗಳ ಹಿಂದೆ ನಗರದ ಎಂ.ಆರ್.ಎಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮಗ ಮಧು ಮೃತಪಟ್ಟಿದ್ದ. ಇನ್ನು, ಪ್ರಕಾಶ್ ಹಾವುಗಳನ್ನು ಹಿಡಿದು ರಕ್ಷಣೆ ಮಾಡುತ್ತಿದ್ದ. ಆದ್ದರಿಂದ ಆತನನ್ನು ಎಲ್ಲರು ಸ್ನೇಕ್ ಪ್ರಕಾಶ್ ಎಂದು ಕರೆಯುತ್ತಿದ್ದರು.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳ್ಳಂಬೆಳಗ್ಗೆ ಆರೋಪಿಗೆ ಗುಂಡೇಟು, ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 3 ಪ್ರಮುಖಾಂಶ ಇಲ್ಲಿದೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment