ಶಿವಮೊಗ್ಗ ಲೈವ್
ಶಿವಮೊಗ್ಗ: ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃದಹಲ್ಲಿ ಶಿವಮಗ್ಗ ಪೊಲೀಸರು ದಿಢೀರ್ ಪರಿಶೀಲನೆ ನಡೆಸಿದರು. ಹೆಚ್ಚವರಿ ಪೊಲೀಸ್ ಅಧೀಕ್ಷಕ ಎ.ಜಿ.ಕಾರಿಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
‘ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿ ಕಾರಾಗೃಹಕ್ಕೆ ಭೇಟಿ ನೀಡಿ, ಕಾರಾಗೃಹದ ಸುರಕ್ಷತೆ, ಕೈದಿಗಳ ಬ್ಯಾರಕ್, ಕಾರಾಗೃಹದ ವ್ಯವಸ್ಥೆ ಪರಿಶೀಲನೆ ನಡೆಸಲಾಯಿತು’ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಕೈದಿಗಳ ಬ್ಯಾರಕ್ನ ಪ್ರತಿ ಸೆಲ್ನಲ್ಲಿಯು ಪೊಲೀಸರು ಪರಿಶೀಲಿಸಿದರು.

ಜೈಲು ಮುಖ್ಯ ಅಧೀಕ್ಷಕ ಡಾ. ಪಿ.ರಂಗನಾಥ್, ಬಂಧಿಖಾನೆ ಸಿಬ್ಬಂದಿ, ಕೆಎಸ್ಐಎಸ್ಎಫ್ ಸಿಬ್ಬಂದಿ ಈ ಸಂದರ್ಭ ಇದ್ದರು.