SHIVAMOGGA LIVE NEWS | TEMPLE | 27 ಮೇ 2022
24 ವರ್ಷದ ಬಳಿಕ ನಡೆಯುತ್ತಿರುವ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು ನೇತೃತ್ವದಲ್ಲಿ ಸಭೆ ನಡೆಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆನವೇರಿಯಲ್ಲಿ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ನಡೆಯಲಿದೆ. ಲಕ್ಷಾಂತರ ಸಂಖ್ಯೆಯ ಭಕ್ತರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಅಶೋಕ್ ನಾಯ್ಕ್ ಅವರು, ಆನವೇರಿಯಲ್ಲಿ ಜಾತ್ರೆಗಾಗಿ ಸಕಲ ಸಿದ್ಧತೆಯಾಗಿದೆ. ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ತ್ಯಾಜ್ಯ ವಿಲೇವಾರಿ ಸೇರಿದಂತೆ ಪ್ರಮುಖ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಅಚ್ಚುಕಟ್ಟಾಗಿ ನಿರ್ವಹಸಲು ಸೂಚಿಸಲಾಗಿದೆ. ಜಾತ್ರೆ ಸಂದರ್ಭ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಇಲಾಖೆಯೊಂದಿಗೆ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ತಿಳಿಸಿದರು.
ಹೊಳೆಹೊನ್ನೂರು ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ, ಮೆಸ್ಕಾಂ ಎಂಜಿನಿಯರ್ ವಿಜಯ್ ಕುಮಾರ್, ಹಿರಿ ಮಾವುರದಮ್ಮ ದೇವಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ, ಎರಡೆ ತಿಂಗಳಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಸಂಗ್ರಹ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.