SHIVAMOGGA LIVE NEWS | 27 FEBRURARY 2023
SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು.
ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು.
![]() |
ಕನ್ನಡ ಭಾಷಣ, ಕುವೆಂಪು ಸ್ಮರಣೆ
‘ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ಜೈ ಭಾರತ ಜನನಿಯ ತನುಜಾತೆ. ಜಯ ಹೇ ಕರ್ನಾಟಕ ಮಾತೆ’ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿದ್ದಂತೆ ಸಭೀಕರು ಜೈ ಎಂದು ಘೋಷಣೆ ಕೂಗಿದರು.
ಇನ್ನು, ಏಕ ಭಾರತ, ಶ್ರೇಷ್ಠ ಭಾರತದ ಸಮರ್ಪಣೆ ಮನೋಭವ ಹೊಂದಿದ್ದ ರಾಷ್ಟ್ರಕವಿ ಕುವೆಂಪು ಅವರ ನೆಲಕ್ಕೆ ನಾನು ನಮನ ಸಲ್ಲಿಸುತ್ತೇನೆ ಎಂದು ಹೇಳಿದಾಗಲೂ ಜನರು ಚಪ್ಪಾಳೆ ತಟ್ಟಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಟರ್ಮಿನಲ್ ನಲ್ಲಿ ಪ್ರಧಾನಿ ಮೋದಿ ಸಂಚಾರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200