ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ (Koodli Sangameshwara) ಜಾತ್ರೆ ಅದ್ಧೂರಿಯಿಂದ ನಡೆಯಿತು. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ವೇಳೆಗೆ ರಥೋತ್ಸವ ನಡೆಯಿತು. ಸುತ್ತಮುತ್ತಲ ಗ್ರಾಮಗಳ ಜನರು ರಥೋತ್ಸವ ಕಣ್ತುಂಬಿಕೊಂಡರು.
ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರಹೊರೆಯ ಜಿಲ್ಲೆಗಳಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಾರೆ.
ಸಂಗಮದಲ್ಲಿ ವಿಶೇಷ ಪೂಜೆ
ತುಂಗಾ ಮತ್ತು ಭದ್ರಾ ನದಿಗಳು ಶಿವಮೊಗ್ಗ ತಾಲೂಕಿನ ಕೂಡ್ಲಿಯಲ್ಲಿ ಸಂಗಮವಾಗುತ್ತವೆ. ಈ ಕ್ಷೇತ್ರದಲ್ಲಿ ಹೊಳೆಯಲ್ಲಿ ಮಿಂದೆದ್ದರೆ ಪುಣ್ಯ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ಇದೆ. ಇವತ್ತು ದೊಡ್ಡ ಸಂಖ್ಯೆಯ ಭಕ್ತರು ಕೂಡ್ಲಿಗೆ ಬಂದು ಪುಣ್ಯ ಸ್ನಾನ ಮಾಡಿದ್ದಾರೆ.

200 ಹಳ್ಳಿಯ ದೇವರುಗಳು
ಸುತ್ತಮುತ್ತಲ ಊರಿನ ಜನರು ಯುಗಾದಿ ಸಂದರ್ಭ ಕೂಡ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಸುಮಾರು 200 ಹಳ್ಳಿಯಿಂದ ಜನರು ಇಲ್ಲಿಗೆ ಬರುತ್ತಾರೆ. ಊರ ದೇವರ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ತಂದು ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಸ್ವಚ್ಛಗೊಳಿಸುತ್ತಾರೆ. ಹೊಳೆ ದಂಡೆ ಮೇಲೆ ಪೂಜೆ ಸಲ್ಲಿಸಿ ಬಳಿಕ ಊರಿಗೆ ಕೊಂಡೊಯ್ಯುವುದು ವಾಡಿಕೆ. ಅದರಂತೆ ಇಂದು ಹಲವು ದೇಗುಲಗಳ ಉತ್ಸವ ಮೂರ್ತಿಗಳನ್ನು ಕೂಡ್ಲಿ ತಂದು ಪೂಜೆ ಸಲ್ಲಿಸಲಾಯಿತು.

ಜಾತ್ರೆ ನೋಡಲು ತೆಪ್ಪದಲ್ಲಿ ಸಂಚಾರ
ಶ್ರೀ ಸಂಗಮೇಶ್ವರ ಸ್ವಾಮಿ ಜಾತ್ರೆ ನೋಡಲು ತೆಪ್ಪದಲ್ಲಿ ಹೋಗಬೇಕು. ಹೊಳೆಯ ನಡುಗಡ್ಡೆಯ ಮೇಲೆ ಅಂಗಡಿಗಳನ್ನು ಹಾಕಲಾಗಿತ್ತು. ಜಾತ್ರೆಗೆ ಬಂದವರು ತೆಪ್ಪಗಳ ಮೂಲಕ ನಡುಗಡ್ಡೆಗೆ ಹೋಗಿ ಜಾತ್ರೆಯಲ್ಲಿ ಪಾಲ್ಗೊಂಡರು. ಸಂಜೆ ವೇಳೆಗೆ ಶ್ರೀ ಸಂಗಮೇಶ್ವರ ಸ್ವಾಮಿಯ ಅದ್ಧೂರಿ ರಥೋತ್ಸವ ನಡೆಯಿತು.

ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣ
ಶಿವಮೊಗ್ಗ ನಗರಕ್ಕೆ ಸಮೀಪದಲ್ಲಿ ಇರುವ ಕೂಡ್ಲಿ ಕ್ಷೇತ್ರವು ಪ್ರಮುಖ ಪ್ರವಾಸಿ ತಾಣವಾಗಿದೆ. ತುಂಗಾ ಮತ್ತು ಭದ್ರಾ ನದಿಗಳ ಸಂಗಮ ಕ್ಷೇತ್ರ ಆಗಿರುವುದರಿಂದ ಇಲ್ಲಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಇನ್ನು ಹೊಳೆ ದಂಡೆ ಮೇಲೆ ಶ್ರೀ ಸಂಗಮೇಶ್ವರ ಸ್ವಾಮಿ ಗುಡಿ ಇದೆ. ಹೊಯ್ಸಳರ ಕಾಲದಲ್ಲಿ ಈ ದೇಗುಲ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಜಾತ್ರೆಗೆ ಬರುವ ಭಕ್ತರು ಸಂಗಮದಲ್ಲಿ ಸ್ನಾನ ಮಾಡಿ, ಸಂಗಮೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ತೆಪ್ಪದ ಮೂಲಕ ನಡುಗಡ್ಡೆಯಲ್ಲಿ ನಡೆಯುತ್ತಿರುವ ಜಾತ್ರೆ ಹೋಗಿ ಬರುತ್ತಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು














