ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 FEBRUARY 2023
SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (Airport) ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
3050 ಮೀ ಉದ್ದ, 45 ಮೀ ಅಗಲದ ರನ್ವೇ, ಆರ್ಇಎಸ್ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, 2347 ಚದುರ ಮೀಟರ್ ಅಳತೆಯಲ್ಲಿ ಎಟಿಸಿ ಕಟ್ಟಡ, 2 ಎಲೆಕ್ಟ್ರಿಕ್ ಸಬ್ ಸ್ಟೇಷನ್, 1 ಫೈರ್ ಸ್ಟೇಷನ್ ಹಾಗೂ ಇತರೆ ಕಾಮಗಾರಿಗಳನ್ನು ಅವರು ಪರಿವೀಕ್ಷಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ವಿಮಾನ ಹಾರಾಟದ ಅನುಮತಿಗೆ ಬೇಕಾದ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅತ್ಯಂತ ಶೀಘ್ರ ವಿಮಾನ ನಿಲ್ದಾಣದ (Airport) ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ತಿಳಿಸಿದರು.
ಇದನ್ನೂ ಓದಿ – ವಿದ್ಯಾನಗರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಹುತೇಕ ಕಂಪ್ಲೀಟ್, ಡ್ರೋಣ್ ಫೋಟೊಗಳು ವೈರಲ್
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಕೆಎಸ್ಐಐಡಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್ ರವಿ, ನಿಗಮದ ನಿರ್ದೇಶಕರಾದ ಸಿ.ಎನ್.ಗಾಯತ್ರಿ ದೇವಿ, ಭಾರತಿ ಮಲ್ಲಿಕಾರ್ಜುನಪ್ಪ ಅಲವಂಡಿ, ಎಸ್ ಮಹಾದೇವಿ ಸ್ವಾಮಿ ಉಪಸ್ಥಿತರಿದ್ದರು.