ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

number-1-advt-copy-new.webp

ಶಿವಮೊಗ್ಗ: ಬೇಡರ ಹೊಸಹಳ್ಳಿ ಕೆರೆ ಬಳಿ ಚಲಿಸುತ್ತಿದ್ದ KSRTC ಬಸ್ಸಿನಿಂದ ಪ್ರಯಾಣಿಕರೊಬ್ಬರು ಬಸ್ಸಿನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್‌ನಲ್ಲಿ ಪಾಸ್‌, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

ಬೆಳಗಾವಿ ಕೆಎಸ್‌ಆರ್‌ಟಿಸಿ ಡಿವಿಜನ್‌ನಲ್ಲಿ ಭದ್ರತಾ ಸಿಬ್ಬಂದಿ ತುಕಾರಾಂ ರಾಮ ಜೈನೋಜಿ (55) ಗಾಯಗೊಂಡವರು. ಶಿವಮೊಗ್ಗದಿಂದ ಬೆಳಗಾವಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಫೆ.28ರಂದು ಬೆಳಗ್ಗೆ ಶಿವಮೊಗ್ಗ-ಹೊನ್ನಾಳಿ ರಸ್ತೆಯ ಬೇಡರ ಹೊಸಹಳ್ಳಿ ಕ್ರಾಸ್ ಹತ್ತಿರ ಬಸ್ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

Crime-News-General-Image

ನಿರ್ವಾಹಕ ಬಸ್ಸಿನ ಬಾಗಿಲನ್ನು ಹಾಕಿರಲಿಲ್ಲ. ಚಾಲಕನು ಕ್ರಾಸ್‌ನಲ್ಲಿ ಬಸ್ಸನ್ನು ಅತಿವೇಗವಾಗಿ ತಿರುಗಿಸಿದ ಪರಿಣಾಮ, ಬಾಗಿಲ ಪಕ್ಕದ ಸೀಟಿನಲ್ಲಿ ಕುಳಿತಿದ್ದ ತುಕಾರಾಂ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆ ಮತ್ತು ಕೈಕಾಲುಗಳಿಗೆ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ. ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment