ಶಿವಮೊಗ್ಗ: ಬೇಡರ ಹೊಸಹಳ್ಳಿ ಕೆರೆ ಬಳಿ ಚಲಿಸುತ್ತಿದ್ದ KSRTC ಬಸ್ಸಿನಿಂದ ಪ್ರಯಾಣಿಕರೊಬ್ಬರು ಬಸ್ಸಿನಿಂದ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಕೆಎಸ್ಆರ್ಟಿಸಿ ಡಿವಿಜನ್ನಲ್ಲಿ ಭದ್ರತಾ ಸಿಬ್ಬಂದಿ ತುಕಾರಾಂ ರಾಮ ಜೈನೋಜಿ (55) ಗಾಯಗೊಂಡವರು. ಶಿವಮೊಗ್ಗದಿಂದ ಬೆಳಗಾವಿಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಫೆ.28ರಂದು ಬೆಳಗ್ಗೆ ಶಿವಮೊಗ್ಗ-ಹೊನ್ನಾಳಿ ರಸ್ತೆಯ ಬೇಡರ ಹೊಸಹಳ್ಳಿ ಕ್ರಾಸ್ ಹತ್ತಿರ ಬಸ್ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ನಿರ್ವಾಹಕ ಬಸ್ಸಿನ ಬಾಗಿಲನ್ನು ಹಾಕಿರಲಿಲ್ಲ. ಚಾಲಕನು ಕ್ರಾಸ್ನಲ್ಲಿ ಬಸ್ಸನ್ನು ಅತಿವೇಗವಾಗಿ ತಿರುಗಿಸಿದ ಪರಿಣಾಮ, ಬಾಗಿಲ ಪಕ್ಕದ ಸೀಟಿನಲ್ಲಿ ಕುಳಿತಿದ್ದ ತುಕಾರಾಂ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆ ಮತ್ತು ಕೈಕಾಲುಗಳಿಗೆ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ. ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ