ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 DECEMBER 2023
SHIMOGA : ಸಕ್ರೆಬೈಲು ಸಮೀಪ ಕೆಟಿಎಂ ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಗಂಭೀರ ಗಾಯವಾಗಿದೆ. ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಗರದ ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ ಭದ್ರಾವತಿಯ ಗ್ರಾಮವೊಂದರ ವಿದ್ಯಾರ್ಥಿನಿ ಮತ್ತು ಎಟಿಎನ್ಸಿ ಕಾಲೇಜು ವಿದ್ಯಾರ್ಥಿ ಗಾಯಗೊಂಡಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಕೆಟಿಎಂ ಬೈಕ್ನಲ್ಲಿ ಸಕ್ರೆಬೈಲಿಗೆ ತೆರಳಿದ್ದು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಕೂಡಲೆ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿದ್ಯಾರ್ಥಿನಿ ತಲೆ, ಪಕ್ಕೆ, ಹಣೆ, ಕಾಲುಗಳಿಗೆ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧ ವಿದ್ಯಾರ್ಥಿನಿ ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬಹಿರಂಗ ಚರ್ಚೆಗೆ ರೆಡಿ, ಈಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






