ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಗ್ರಾಮದ ಅಡಿಕೆ ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ (pesticide) ಸಿಂಪಡಣೆ ಮಾಡುವ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ತೋಟದ ಮಾಲೀಕನ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಂಜಾನಾಯ್ಕ ಎಂಬ ಕಾರ್ಮಿಕ ಶ್ರೀರಾಂಪುರದ ಏಕಾಂತಪ್ಪ ಎಂಬುವವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಮರಳಿದಾಗ ತೀವ್ರ ಕೆಮ್ಮು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಮಂಜಾನಾಯ್ಕ ಅವರನ್ನು ಗಾಡಿಕೊಪ್ಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ ನಂತರ ರಕ್ತವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆ ಮಾಡುವ ಸಮಯದಲ್ಲಿ ತೋಟದ ಮಾಲೀಕರು ಯಾವುದೇ ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ. ಕಾರ್ಮಿಕನಿಗೆ ಸುರಕ್ಷತಾ ಸಾಧನಗಳನ್ನು ನೀಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ