ಶಿವಮೊಗ್ಗದ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸಿದ ಬಳಿಕ ಕಾರ್ಮಿಕನಿಗೆ ರಕ್ತವಾಂತಿ, ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಗ್ರಾಮದ ಅಡಿಕೆ ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ (pesticide) ಸಿಂಪಡಣೆ ಮಾಡುವ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ತೋಟದ ಮಾಲೀಕನ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಂಜಾನಾಯ್ಕ ಎಂಬ ಕಾರ್ಮಿಕ ಶ್ರೀರಾಂಪುರದ ಏಕಾಂತಪ್ಪ ಎಂಬುವವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಮರಳಿದಾಗ ತೀವ್ರ ಕೆಮ್ಮು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಮಂಜಾನಾಯ್ಕ ಅವರನ್ನು ಗಾಡಿಕೊಪ್ಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ ನಂತರ ರಕ್ತವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ತಾಳಗುಪ್ಪದವರೆಗೆ ರೈಲು ವಿಸ್ತರಣೆ, ಸಂಸದರ ಮನವಿಗೆ ಮಿನಿಸ್ಟರ್‌ ಒಪ್ಪಿಗೆ, ಯಾವ ರೈಲು? ಯಾಕೆ?

Areca-Farm-Adike-tota-in-Shimoga

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆ ಮಾಡುವ ಸಮಯದಲ್ಲಿ ತೋಟದ ಮಾಲೀಕರು ಯಾವುದೇ ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ. ಕಾರ್ಮಿಕನಿಗೆ ಸುರಕ್ಷತಾ ಸಾಧನಗಳನ್ನು ನೀಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

Leave a Comment