ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 AUGUST 2023
SHIMOGA : ಚಿರತೆಯೊಂದು ಮಹಿಳೆ ಮೇಲೆ ದಾಳಿ (Attack) ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. 42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಬಹು ಹೊತ್ತಾದರು ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಉರುಳಿಗೆ ಸಿಲುಕಿ ಚಿರತೆ ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು
ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ ಕುರುಹು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು, ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಸ್ಥಳದಲ್ಲಿನ ಹೆಜ್ಜೆ ಗುರುತುಗಳನ್ನ ಗಮನಿಸಿ ಚಿರತೆ ದಾಳಿ ನಡೆಸಿರಬಹುದು ಎಂದು ಶಂಕಿಸಿದ್ದಾರೆ.