ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 AUGUST 2023
SHIMOGA : ಗಂಡು ಚಿರತೆಯೊಂದು (Leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿಗೆ ಸಮೀಪದಲ್ಲಿ ಹತ್ತು ದಿನದ ಹಿಂದೆ ಚಿರತೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದರು. ಲೆಪರ್ಡ್ ಟಾಸ್ಕ್ ಫೋರ್ಸ್ (Task Force) ಮತ್ತು ಅರಣ್ಯ ಇಲಾಖೆ (Forest Department) ಸಿಬ್ಬಂದಿ ಚಿರತೆಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ (Kunchenahalli) ಮೀಸಲು ಅರಣ್ಯ ವ್ಯಾಪ್ತಿಯ ಬಿಕ್ಕೋನಹಳ್ಳಿ (Bikkonahalli) ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿತ್ತು. ಸುಮಾರು 7 ರಿಂದ 8 ವರ್ಷದ ಗಂಡು ಚಿರತೆ ಬಂಧಿಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ವಶಕ್ಕೆ ಪಡೆದರು.
ಮಹಿಳೆ ಮೇಲೆ ಚಿರತೆ ದಾಳಿ
ಆ.8ರಂದು ಶಂಕರ ಅರಣ್ಯ ವಿಭಾಗದ ವ್ಯಾಪ್ತಿಯ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. ಯಶೋದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರ ಬೆನ್ನಿಗೆ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ವತಿಯಿಂದ ವಿವಿಧೆಡೆ ನಿಗಾ ವಹಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ
ಟಾಸ್ಕ್ ಫೋರ್ಸ್‌ನಿಂದ ಕಾರ್ಯಾಚರಣೆ
ನರಭಕ್ಷಕ ಚಿರತೆ ಸೆರೆ ಹಿಡಿಯಲು ಮೈಸೂರಿನಿಂದ ನುರಿತ ಲೆಪರ್ಡ್ ಟಾಸ್ಕ್ ಫೋರ್ಸ್ ತಂಡ ಕರೆಯಿಸಲಾಗಿತ್ತು. ಚಿರತೆ ಓಡಾಡುವ ಜಾಗಗಳಲ್ಲಿ 15 ಕಡೆ ಕ್ಯಾಮರಾ ಅಳವಡಿಸಲಾಗಿತ್ತು. ಏಳು ಕಡೆ ಬೋನ್‌ಗಳನ್ನು ಇರಿಸಲಾಗಿತ್ತು. ಕ್ಯಾಮರಾದ ಮೂಲಕ ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಲಾಗಿತ್ತು. ಇವತ್ತು ಬೋನಿಗೆ ಬಿದ್ದಿರುವ ಚಿರತೆ ಮತ್ತು ಕ್ಯಾಮರಾದಲ್ಲಿ ಸೆರೆಯಾಗಿರುವ ಚಿರತೆಗು ಹೋಲಿಕೆ ಇದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422