ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021
ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಮಾಲ್ಗುಡಿ ಮ್ಯೂಸಿಯಂ ಪುನಾರಂಭವಾಗುತ್ತಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.
ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಜುಲೈ 9ರಿಂದ ಪುನಾರಂಭವಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಮ್ಯೂಸಿಯಂ ಮುಕ್ತವಾಗಿರಲಿದೆ. ಪ್ರತಿ ಮಂಗಳವಾರ ವಾರದ ರಜೆ ಇರಲಿದೆ.
ಮ್ಯೂಸಿಯಂಗೆ ಭೇಟಿ ನೀಡುವವರು ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆಯ ಡಿವಿಷನಲ್ ಮ್ಯಾನೇಜರ್ ರಾಹುಲ್ ಅಗರ್‍ವಾಲ್ ತಿಳಿಸಿದ್ದಾರೆ.
ಆರ್.ಕೆ.ನಾರಾಯಣ್ ಅವರ ಕೃತಿ ಆಧರಿಸಿ ನಟ, ನಿರ್ದೇಶಕ ಶಂಕರ್ ನಾಗ್ ಅವರು ಮಾಲ್ಗುಡಿ ಡೇಸ್ ಧಾರವಾಹಿ ನಿರ್ಮಿಸಿದ್ದರು. ಅರಸಾಳು ರೈಲ್ವೆ ನಿಲ್ದಾಣದಲ್ಲೂ ಧಾರವಾಹಿ ಚಿತ್ರೀಕರಣವಾಗಿತ್ತು. ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿದೆ. ಇತ್ತೀಚೆಗಷ್ಟೆ ಉದ್ಘಾಟನೆಯಾಗಿದ್ದರೂ, ಮಾಲ್ಗುಡಿ ಮ್ಯೂಸಿಯಂ ಪ್ರವಾಸಿಗರನ್ನು ದೊಡ್ಡ ಸಂಖ್ಯೆಯಲ್ಲಿ ಸೆಳೆದಿತ್ತು. ಕೋವಿಡ್ ಕಾರಣದಿಂದಾಗಿ ಮ್ಯೂಸಿಯಂ ಬಂದ್ ಮಾಡಲಾಗಿತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






