ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021
ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.
ಈ ವೇಳೆ ಪಿಎಲ್‌ಡಿ ಬ್ಯಾಂಕ್‌ನ ಉಪಾಧ್ಯಕ್ಷರಾದ ಆರ್.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅನಿಲ್, ಸದಸ್ಯರಾದ ಹೇಮೇಶ್ ನಾಯ್ಕ್, ಸುಮಿತ್ರಮ್ಮ, ಮುಖಂಡರಾದ ಅರುಣ್ ನಾಯ್ಡು, ಹೇಮಂತ್, ನಾಗರಾಜ್ ಮತ್ತಿತರರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















