ಪಿಳ್ಳಂಗಿರಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ, ಜಿಲ್ಲೆಯಾದ್ಯಂತ ವಿತರಣೆಗೆ ಚಾಲನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್‌ ಉಪಹಾರ ಯೋಜನೆ ಅಡಿ ಮೊಟ್ಟೆ (Egg), ಬಾಳೆಹಣ್ಣು (Banana), ಶೇಂಗಾ ಚಿಕ್ಕಿ ವಿತರಣೆ ಆರಂಭಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರು ಪಿಳ್ಳಂಗಿರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು.

ಈ ಹಿಂದೆ 1 ರಿಂದ 8 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ವಾರದಲ್ಲಿ ಒಂದು ದಿನ ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ (Students) ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಾರ್ಷಿಕ ಒಟ್ಟು 46 ದಿನ ವಿತರಿಸಲಾಗುತ್ತಿತ್ತು. ಈಗ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗು ಯೋಜನೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ತಿಳಿಸಿದರು.

ಇದನ್ನೂ ಓದಿ- ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, ಹಲವರು ವಶಕ್ಕೆ

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲೆಯಲ್ಲಿ ಒಟ್ಟು 1,59,507 ವಿದ್ಯಾರ್ಥಿಗಳಿದ್ದು ವಾರ್ಷಿಕವಾಗಿ ಈ ಯೋಜನೆಯಡಿ 7.65 ಕೋಟಿ ರೂ. ಅನುದಾನ ನಿಗದಿಯಾಗಿದೆ. ಇಂದು ಪಿಳ್ಳಂಗಿರಿ ಪ್ರೌಢಶಾಲೆಯಲ್ಲಿ ಹಾಜರಿದ್ದ 254 ಮಕ್ಕಳ ಪೈಕಿ 224 ಮಕ್ಕಳು ಮೊಟ್ಟೆ, 29 ಮಕ್ಕಳು ಶೇಂಗಾ ಚಿಕ್ಕಿ ಮತ್ತು 1 ಮಗು ಬಾಳೆ ಹಣ್ಣನ್ನು ಸೇವಿಸಿದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಇಓ ನಾಗರಾಜ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ದಾದಾಪೀರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ, ಸಹ ಶಿಕ್ಷಕರು, ಶಿಕ್ಷಣ ಸಂಯೋಜನಾಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment