ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾಸಿಗರು ಇದ್ದರು ಎಂದು ತಿಳಿದು ಬಂದಿದೆ. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಪ್ರವಾಸಿಗರು ತರೀಕೆರೆ ಮರಳುತ್ತಿದ್ದರು. ಕೆಳಕಿನ ಕುಂಚೇನಹಳ್ಳಿ ಬಳಿ ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.
ನೆರವಿಗೆ ಧಾವಿಸಿದ ಸ್ಥಳೀಯರು
ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೆಳಗಿನ ಕುಂಚೇನಹಳ್ಳಿ ಮತ್ತು ಮೇಲಿನ ಕುಂಚೇನಹಳ್ಳಿಯ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪಲ್ಟಿಯಾಗಿದ್ದ ಬಸ್ಸಿನಲ್ಲಿದ್ದ ಜನರನ್ನು ಹೊರಗೆ ಎಳೆದಿದ್ದಾರೆ. ಐದಾರು ಪುಟ್ಟ ಮಕ್ಕಳು, ಮಹಿಳೆಯರು ಸಹಿತ ಸುಮಾರು 25 ಪ್ರವಾಸಿಗರನ್ನು ರಕ್ಷಿಸಿದ್ದಾರೆ. ಕೆಲವರಿಗೆ ಗಂಭೀರ ಗಾಯವಾಗಿದ್ದು ಎಲ್ಲರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? SP ಫಸ್ಟ್ ರಿಯಾಕ್ಷನ್?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






