ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಸಂದರ್ಭ ನೀರಾನೆ ದಾಳಿಯಿಂದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ (inquiry) ಆದೇಶಿಸಿದ್ದಾರೆ.
ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. ಘಟನೆ ಸಂಭವಿಸಲು ಕಾರಣಗಳೇನು ಮತ್ತು ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ಪರಾಮರ್ಶಿಸಿ, ಮುಂದಿನ 7 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಕಟ್ಟುನಿಟ್ಟಿನ ಎಸ್‌ಒಪಿ ಪಾಲನೆಗೆ ಸೂಚನೆ
ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭ ಪಾಲಿಸಬೇಕಾದ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು (SOP) ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ವನ್ಯಜೀವಿಗಳ ಹತ್ತಿರ ಹೋಗುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು
ಪರಿಹಾರ ಘೋಷಣೆ
ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ದುರದೃಷ್ಟಕರ ಘಟನೆ. ಪ್ರತಿ ಜೀವವೂ ಅಮೂಲ್ಯ. ಸರ್ಕಾರವು ಮೃತ ವೈದ್ಯರ ಕುಟುಂಬದ ಪರವಾಗಿ ನಿಲ್ಲಲಿದೆ, ಎಂದು ಸಂತಾಪ ಸೂಚಿಸಿದ್ದಾರೆ.

LATEST NEWS
- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

About The Editor
ನಿತಿನ್ ಆರ್.ಕೈದೊಟ್ಲು














