ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಸಂದರ್ಭ ನೀರಾನೆ ದಾಳಿಯಿಂದ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ (inquiry) ಆದೇಶಿಸಿದ್ದಾರೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. ಘಟನೆ ಸಂಭವಿಸಲು ಕಾರಣಗಳೇನು ಮತ್ತು ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ಪರಾಮರ್ಶಿಸಿ, ಮುಂದಿನ 7 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

Trainee-veterinarian-Dr.-Samiksha-Reddy-die-after-a-hippopotamus-attack-at-Tyavarekoppa-Safari.

Trainee-veterinarian-Dr.-Samiksha-Reddy-die-after-a-hippopotamus-attack-at-Tyavarekoppa-Safari.

ಕಟ್ಟುನಿಟ್ಟಿನ ಎಸ್‌ಒಪಿ ಪಾಲನೆಗೆ ಸೂಚನೆ

ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭ ಪಾಲಿಸಬೇಕಾದ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು (SOP) ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ವನ್ಯಜೀವಿಗಳ ಹತ್ತಿರ ಹೋಗುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಪರಿಹಾರ ಘೋಷಣೆ

ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ದುರದೃಷ್ಟಕರ ಘಟನೆ. ಪ್ರತಿ ಜೀವವೂ ಅಮೂಲ್ಯ. ಸರ್ಕಾರವು ಮೃತ ವೈದ್ಯರ ಕುಟುಂಬದ ಪರವಾಗಿ ನಿಲ್ಲಲಿದೆ, ಎಂದು ಸಂತಾಪ ಸೂಚಿಸಿದ್ದಾರೆ.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment