ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
RSS ಮುಖ್ಯಸ್ಥರಾದ ಬಳಿಕ ಡಾ.ಮೋಹನ್ ಭಾಗವತ್ ಅವರು ಮೊದಲ ಬಾರಿಗೆ ಶಿವಮೊಗ್ಗದ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ ನೀಡಿದ್ದರು. ಅಲ್ಲಿ ನಡೆ ತುಂಗಾ ನಮಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸುವ ತುಂಗಾ ಆರತಿ ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಪಾಲ್ಗೊಂಡಿದ್ದರು. ತುಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೂರಿನ ಪ್ರಮುಖರು, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸರಸಂಘಚಾಲಕರ ಜೊತೆ ಸಂವಾದ
RSS ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಾದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು, ಮೊಬೈಲ್ ಬಳಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಮಕ್ಕಳು ಮೊಬೈಲ್ ದಾಸರಾಗುವುದನ್ನು ಪಾಲಕರು ತಪ್ಪಿಸಬೇಕು ಎಂದು ಸಲಹೆ ನೀಡಿದರು.
ವೇದ, ವೇದಾಂತ, ಯಜ್ಞ ಪ್ರಯೋಗ, ಸಂಸ್ಕೃತ, ಸಂಗೀತ, ಗಮಕ, ಕೃಷಿ, ಸಹಕಾರ, ಜ್ಯೋತಿಷ್ಯ, ಭಜನೆ, ಶಿಕ್ಷಣ, ಸಂಘಟನೆ ಸೇರಿದಂತೆ ಹಿಂದೂ ಸಂಸ್ಕೃತಿಯ ವೈಶಿಷ್ಟ್ಯ ಪೂರ್ಣ ಸಂಗತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವಲ್ಲಿ ಮತ್ತೂರು ಹೊಸಹಳ್ಳಿ ಗ್ರಾಮ ಮತ್ತು ಗ್ರಾಮಸ್ಥರ ಪಾತ್ರ ಕುರಿತು ಸಂವಾದದಲ್ಲಿ ಚರ್ಚಿಸಲಾಯಿತು. 100ಕ್ಕೂ ಹೆಚ್ಚು ಆಹ್ವಾನಿತರು ಸಂವಾದದಲ್ಲಿ ಭಾಗವಹಿಸಿದ್ದರು.
RSS ಸಹ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ, ಮುಕುಂದ, ಸಹಕ್ಷೇತ್ರಿಯ ಪ್ರಚಾರಕ ಸುಧೀರ್, ಸಂಸ್ಕೃತ ಭಾರತಿಯ ಪ್ರಮುಖರಾದ ದಿನೇಶ್ ಕಾಮತ್, ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿ ಸದಸ್ಯ ಪಟ್ಟಾಭಿರಾಮ್, ವಿದಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಸೇರಿದಂತೆ ಹಲವರು ಭಾಗವಹಸಿದ್ದರು.
ಬಿಗಿ ಬಂದೋಬಸ್ತ್
RSS ಸರಸಂಘಚಾಲಕ ಮೋಹನ್ ಭಾಗವತ್ ಅವರ ಭೇಟಿ ಹಿನ್ನೆಲೆ, ಮತ್ತೂರು ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮತ್ತೂರು ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
RSS Chief Dr.Mohan Bhagavath Visited Mattur Village in Shimoga. Dr Mohan Bhagavath Participated in the Namami Ganga event.