ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 JULY 2023

SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ.

PARISHRAMA NEET ACADEMY

ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ ಟಿವಿ ಶೋಕೇಸ್‌ನಲ್ಲಿದ್ದ 23,500 ರೂ. ನಗದು, ಕೊಟ್ಟಿಗೆಯಲ್ಲಿದ್ದ 35 ಕೆ.ಜಿ ಒಣ ಅಡಿಕೆ ಕಳ್ಳತನವಾಗಿದೆ. ಇದರ ಮೌಲ್ಯದ ಅಂದಾಜು 20 ಸಾವಿರ ರೂ. ಇದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

ಕೆಲಸಕ್ಕಿದ್ದ ದಂಪತಿ ನಾಪತ್ತೆ

ಹರೀಶ್‌ ಅವರ ಮನೆಯಲ್ಲಿ ನ್ಯಾಮತಿಯ ರಮೇಶ್‌ ಮತ್ತು ಆತನ ಪತ್ನಿ ಭಾಗ್ಯ ಎಂಬುವವರು ಕಳೆದ ಒಂದು ವರ್ಷದಿಂದ ಜಮೀನು ಕೆಲಸ ಮಾಡುತ್ತಿದ್ದರು. ಜು.11ರ ರಾತ್ರಿ ನಗದು ಮತ್ತು ಅಡಿಕೆ ಕಳ್ಳತನ ಮಾಡಿಕೊಂಡು ದಂಪತಿ ಬೈಕಿನಲ್ಲಿ ಪರಾರಿಯಾಗಿದ್ದಾರೆ. ಇದನ್ನು ಊರಿನ ಕೆಲವರು ಕಂಡಿದ್ದಾರೆ ಎಂದು ಹರೀಶ್‌ ದೂರಿನಲ್ಲಿ ಆರೋಪಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment